ಮಹಿಳೆಯರ ಪತ್ರಿಕೆಗಳ ಸಬಲೀಕರಣಕ್ಕೆ ಜಾಹೀರಾತು ನೆರವು ನೀಡಲು ಕ್ರಮ ವಹಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಅಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ ಮಹಿಳಾ ಸಂಪಾದಕಿಯರ ನಿಯೋಗ ಭೇಟಿ ಮಾಡಿದಾಗ ಬೇಡಿಕೆ ಈಡೇರಿಸುವುದಾಗಿ ಹೇಳಿದರು.
ದೀರ್ಘ ಅವಧಿಯಿಂದ ತಮ್ಮ ಸಂಪಾದಕತ್ವದಲ್ಲಿಯೇ ಪತ್ರಿಕೆ ನಡೆಸಿಕೊಂಡು ಬಂದಿರುವ ಬಗ್ಗೆ ಸಿಎಂ ಗಮನ ಸೆಳೆಯಲಾಯಿತು.
ಕನಿಷ್ಠ ಹತ್ತು ವರ್ಷದಿಂದ ತಮ್ಮ ಸಂಪಾದಕತ್ವದಲ್ಲಿ ನಡೆಯುತ್ತಿರುವ ಪತ್ರಿಕೆಗಳಿಗೆ ಹೆಚ್ಚು ಜಾಹೀರಾತು ಮತ್ತು ಸೌಲಭ್ಯ ನೀಡಬೇಕು ಎಂದು ಮಹಿಳಾ ಸಂಪಾದಕಿಯರು ಸಿಎಂಗೆ ಮನವಿ ಮಾಡಿದರು.
ಮಹಿಳಾ ಸಂಪಾದಕಿಯರ ಸಂಘದ ಅಧ್ಯಕ್ಷೆ ರಶ್ಮಿ ಪಾಟೀಲ್, ಲೀಲಾವತಿ, ರೇಖಾ ಪ್ರಕಾಶ್, ಶಾಂಭವಿ, ಮಂಜುಳಾ, ಅರುಣಾ, ಸುಧಾರಾಣಿ, ಗೀತಾ ಮತ್ತಿತರರು ನಿಯೋಗದಲ್ಲಿದ್ದರು.
- ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
- 2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
- 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ
- HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ
- ಮಳೆ ನಿಂತರೂ ಮರದ ಹನಿ ನಿಲ್ಲದು
More Stories
ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ