ಹಿಜಬ್ ತೀರ್ಪು ಪ್ರಕಟಿಸಿದ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರಿಗೆ ಕೊಲೆಬೆದರಿಕೆ ಹಾಕಿದ್ದ ಆರೋಪಿಯನ್ನು ಮಧುರೈ ಪೊಲೀಸರು ಬಂಧಿಸಿದ್ದಾರೆ.
ರೆಹಮತ್ತುಲ್ಲಾ ಬಂಧಿತ ಆರೋಪಿ. ಈತ ತೌಹಿಫ್ ಜಮಾತ್ ಸಂಘಟನೆಯ ಸದಸ್ಯ . ಮಧುರೈ ಪೊಲೀಸರು ಶನಿವಾರ ರಾತ್ರಿ ಆರೋಪಿಯನ್ನು ತಿರುನಲ್ವೇಲಿಯಲ್ಲಿ ಬಂಧಿಸಿದ್ದರು.
ಆರೋಪಿಗೆ ಮಾರ್ಚ್ 31ರ ವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಆತನನ್ನು ತಿರುಪತ್ತೂರ್ ಜೈಲಿನಲ್ಲಿರಿಸಲಾಗಿದೆ.
ಹಿಜಬ್ ತೀರ್ಪು ಪ್ರಕಟಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ತಮಿಳುನಾಡು ಮೂಲದ ಮತೀಯ ಸಂಘಟನೆಯೊಂದು ಕೊಲೆ ಬೆದರಿಕೆ ಹಾಕಿತ್ತು.
ತೌಹೀದ್ ಜಮಾತ್ ಸಂಘಟನೆ ಬೆದರಿಕೆ ಹಾಕಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸಂಘಟನೆ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಮಧುರೈ ಪೊಲೀಸರೂ ಪ್ರಕರಣ ದಾಖಲಿಸಿಕೊಂಡಿದ್ದರು. ನ್ಯಾಯಾಧೀಶರಿಗೆ ಕೊಲೆ
ಬೆದರಿಕೆ ಹಾಕಿದ ಸಂಬಂಧ ತನಿಖೆ ನಡೆಸುವಂತೆ ಒತ್ತಾಯಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಅವರಿಗೆ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್ ಮನವಿ ಮಾಡಿದ್ದರು.
ತೌಹೀದ್ ಜಮಾತ್ ಸಂಘಟನೆಯ ಮುಖಂಡ ಆರ್.ರೆಹ್ಮತ್‍ವುಲ್ಲಾ ಮಧುರೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹಿಜಬ್ ತೀರ್ಪಿಗೆ ಆಕ್ಷೇಪ ವ್ಯಕ್ತಪಡಿಸಿ ಪರೋಕ್ಷವಾಗಿ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋ ಆಧಾರಿಸಿ ವಕೀಲ, ಸುಧಾ ಕಟ್ವ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣ ಸಂಬಂಧ ಐಪಿಸಿ ಸೆಕ್ಷನ್ 506(ಬೆದರಿಕೆ), 501(1)(ಮಾನಹಾನಿ), 503(ಕ್ರಿಮಿನಲ್ ಬೆದರಿಕೆ), 109(ಪ್ರಚೋದನೆ), 504(ಶಾಂತಿ ಭಂಗ), 505(ಸಾರ್ವಜನಿಕ ಕಿಡಿಗೇಡಿತನ) ಸೇರಿದಂತೆ ವಿವಿಧ ಸೆಕ್ಷನ್‍ಗಳಲ್ಲಿ ಎಫ್‍ಐಆರ್ ದಾಖಲಾಗಿದೆ.
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ