ತಾನು ಪ್ರೀತಿಸಿದ ಯುವಕ ಕೈಕೊಟ್ಟು ಮತ್ತೊಬ್ಬಳ ಜೊತೆ ಅವನು ವಿವಾಹ ನಡೆಯುತ್ತಿರುವ ವೇಳೆಯಲ್ಲೇ ಉಪನ್ಯಾಸಕಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ರೂಪ (28) ಎಂಬವರೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವಮೊಗ್ಗದ ರೂಪಾ ಹಾಗೂ ಮುರಳಿ ಕಳೆದ ನಾಲ್ಕೈದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.
ಜಾತಿಯಲ್ಲಿ ಇಬ್ಬರು ಬೇರೆಯಾದರೂ ಇಬ್ಬರೂ ವೃತ್ತಿಯಲ್ಲಿ ಉಪನ್ಯಾಸಕರಾಗಿದ್ದರು. ಮುರಳಿ ಡಿವಿಎಸ್ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದ. ರೂಪಾ ಸಹ್ಯಾದ್ರಿ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕಿಯಾಗಿದ್ದರು.
ಇದರೊಂದಿಗೆ ಇಬ್ಬರೂ ಪಿಎಚ್.ಡಿ ಯನ್ನು ಮಾಡುತ್ತಿದ್ದರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಇನ್ನೆರಡು ತಿಂಗಳಿನಲ್ಲಿ ಪಿಎಚ್‍ಡಿ ಪದವಿಧರೆಯಾಗುತ್ತಿದ್ದರು.
ಅಷ್ಟರಲ್ಲೇ ಪ್ರೀತಿಯಲ್ಲಿ ಬಿದ್ದು ತನ್ನ ಜೀವವನ್ನೇ ಕಳೆದುಕೊಂಡಿದ್ದಾರೆ. ಇದರಿಂದ ಪಿಎಚ್‍ಡಿ ಡಾಕ್ಟರೇಟ್ ಪಡೆಯುವ ಕನಸೂ ನುಚ್ಚುನೂರಾಗಿದೆ. ರೂಪಾಪ್ರೀತಿ ವಿಷಯ ತಿಳಿದ ಪೋಷಕರೇ ಜಾತಿ ಬೇರೆಯಾಗಿದ್ದರೂ ಪರವಾಗಿಲ್ಲ. ಮಗಳು ಚೆನ್ನಾಗಿದ್ದರೆ ಸಾಕು ಎಂದು ಮುರಳಿ ಜೊತೆ ವಿವಾಹ ಮಾಡಲು ನಿರ್ಧರಿಸಿದ್ದರು.
ಆದರೆ ಮುರಳಿ ರೂಪಾಳಿಗೆ ಕೈಕೊಟ್ಟು ಇಂದು (ಭಾನುವಾರ) ಶಿವಮೊಗ್ಗದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಪಲ್ಲವಿ ಎಂಬ ಯುವತಿಯೊಂದಿಗೆ ಮದುವೆ ಮಾಡಿಕೊಂಡಿದ್ದಾನೆ.
ಈ ಆಘಾತದಿಂದ ಮನನೊಂದ ರೂಪ ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರೂಪ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿಯುತ್ತಿದ್ದಂತೆ ಪಲ್ಲವಿಗೆ ತಾಳಿ ಕಟ್ಟುತ್ತಿದ್ದಂತೆ ಮುರಳಿ ಕಲ್ಯಾಣ ಮಂಟಪದಿಂದಲೇ ಪರಾರಿಯಾಗಿದ್ದಾನೆ.
ಘಟನೆ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮುರಳಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ