ಕನ್ನಡದ ರಾಜರತ್ನ ಪುನೀತ್ ರಾಜ್ಕುಮಾರ್ ಅವರಿಗೆ ನೀಡಲಾಗಿದ್ದ ಮೈಸೂರು ವಿಶ್ವವಿದ್ಯಾಲಯ ಮರಣೋತ್ತರ ಗೌರವ ಡಾಕ್ಟರೇಟ್ ಪದವಿಯನ್ನು ಅಶ್ವಿನಿ ಪುನೀತ್ರಾಜ್ಕುಮಾರ್ ಅವರಿಗೆ ಪ್ರದಾನ ಮಾಡಲಾಯಿತು. ಈ ವೇಳೆ ಪುನೀತ್ ಅವರನ್ನು ನೆನೆದು ಅಶ್ವಿನಿ ಕಣ್ಣೀರಿಟ್ಟರು.

ಮೈಸೂರು ವಿಶ್ವವಿದ್ಯಾಲಯದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಅನ್ನು ಕ್ರಾಫರ್ಡ್ ಹಾಲ್ನಲ್ಲಿ ನಡೆದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪ್ರದಾನ ಮಾಡುವ ವೇಳೆ ನಟ ರಾಘವೇಂದ್ರ ರಾಜ್ಕುಮಾರ್, ಪತ್ನಿ ಮಂಗಳ, ನಟ ವಿನಯ್ ರಾಜ್ಕುಮಾರ್, ಡಾ.ರಾಜ್ ಕುಮಾರ್ ಪುತ್ರಿ ಲಕ್ಷ್ಮಿ ಗೋವಿಂದು ಹಾಗೂ ಮೊಮ್ಮಕ್ಕಳು ಸೇರಿದಂತೆ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಭಾಗಿಯಾಗಿದ್ದರು.
ವರನಟ ರಾಜ್ ಕುಮಾರ್ ಅವರಿಗೆ ಡಾಕ್ಟರೇಟ್ ನೀಡಿ ಗೌರವಿಸಿದ್ದ ಮೈಸೂರು ವಿಶ್ವವಿದ್ಯಾಲಯವೇ ಈಗ ಪುನೀತ್ ಅವರಿಗೂ ಡಾಕ್ಟರೇಟ್ ಕೊಟ್ಟಿರೋದು ತುಂಬಾ ವಿಶೇಷವೆನಿಸಿದೆ. 1976ರಲ್ಲಿ ಅಣ್ಣಾವ್ರಿಗೆ ಡಾಕ್ಟರೇಟ್ ಸಿಕ್ತು. ಜಗತ್ತಿನಲ್ಲೇ ಮೊಟ್ಟ ಮೊದಲ ಬಾರಿಗೆ ಸಿನಿಮಾ ನಟನೊಬ್ಬ ಡಾಕ್ಟರೇಟ್ ಪಡೆದ ಖ್ಯಾತಿ ರಾಜ್ ಕುಮಾರ್ ಅವರಿಗೆ ಸಲ್ಲುತ್ತದೆ. ಈಗ ಪುನೀತ್ ಅವರಿಗೆ ಮೈಸೂರು ವಿ ವಿ ಮರಣೋತ್ತರ ಡಾಕ್ಟರೇಟ್ ನೀಡಿ ಗೌರವಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು