ಅಡುಗೆ ಮಾಡುವಾಗ ಹಾವು ಕಚ್ಚಿ ಗೃಹಿಣಿಯೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮೇಲಿಗೆಬೆಸಿಗೆ ಗ್ರಾಮದಲ್ಲಿ ಕಳೆದ ರಾತ್ರಿ ಜರುಗಿದೆ.
ಸೌಮ್ಯ (24) ಮೃತಪಟ್ಟ ಗೃಹಿಣಿ. ಸೌಮ್ಯ ಅಡುಗೆ ಮಾಡಲು ಅಡುಗೆ ಮನೆಗೆ ತೆರಳಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ವಿಷಕಾರಿ ಹಾವು ಸೌಮ್ಯ ಕಾಲಿಗೆ ಕಚ್ಚಿದೆ.
ಹಾವು ಕಚ್ಚಿರುವುದು ಸೌಮ್ಯಗೆ ತಿಳಿದಿಲ್ಲ. ಸ್ವಲ್ಪ ಸಮಯದ ಬಳಿಕ ಕಾಲಿನಲ್ಲಿ ಊತ ಕಾಣಿಸಿಕೊಂಡು ತೀವ್ರ ನೋವು ಉಂಟಾಗಿದೆ. ಹಾವು ಕಚ್ಚಿರುವ ಬಗ್ಗೆ ಅನುಮಾನಗೊಂಡ ಕುಟುಂಬಸ್ಥರು ಹೊಸನಗರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.
ಹೊಸನಗರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಸೌಮ್ಯ ಮೃತಪಟ್ಟಿದ್ದಾರೆ.
ಸೌಮ್ಯ ನಾಲ್ಕು ವರ್ಷದ ಹಿಂದೆ ನಾಗರಾಜ್ ಎಂಬವರ ಜೊತೆ ವಿವಾಹವಾಗಿದ್ದರು. ಈ ದಂಪತಿಗೆ ಮೂರು ವರ್ಷದ ಗಂಡು ಮಗವಿತ್ತು.
ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
- ಮುಡಾ ಹಗರಣ: ಬದಲಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ, ತನಿಖಾ ವರದಿ ಆಧರಿಸಿ ಸರ್ಕಾರದ ಕ್ರಮ
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ