ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ (ಎಲ್ಇಟಿ) ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರನ್ನು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾರತೀಯ ಸೇನಾಪಡೆ ಸಿಬ್ಬಂದಿ ಎನ್ಕೌಂಟರ್ ನಡೆಸಿ, ಹತ್ಯೆ ಮಾಡಿದೆ.
ಎಲ್ಇಟಿ ಮತ್ತು ಭಾರತೀಯ ಸೇನೆಯ ನಡುವೆ ಶ್ರೀನಗರದಲ್ಲಿ ಗುಂಡಿನ ಚಕಮಕಿ ನಡೆದಿದೆ. ಈ ಘಟನೆಯಲ್ಲಿ ಎಲ್ಇಟಿ ಕಮಾಂಡರ್ ಸೇರಿ ಇಬ್ಬರು ಉಗ್ರರು ಹತ್ಯೆ ಯಾದರು.
ನೌಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ ಎಲ್ಇಟಿ ಕಮಾಂಡರ್ ಸೈಫುಲ್ಲಾ ಭಾರತೀಯ ಸೇನೆಯ ಎನ್ಕೌಂಟರ್ಗೆ ಬಲಿಯಾಗಿದ್ದಾನೆ.
ಜಮ್ಮುವಿನ ಶ್ರೀನಗರದ ಬಾರ್ಜುಲ್ಲಾ-ರಾಮ್ಬಾಘ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಖಚಿತ ಮಾಹಿತಿ ಮೇರೆಗೆ ಸಿಆರ್ಪಿಎಫ್ ಯೋಧರ ಜೊತೆ ಜಮ್ಮು ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಾರತೀಯ ಸಿಆರ್ಪಿಎಫ್ ಯೋಧರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಜಮ್ಮು ಕಾಶ್ಮೀರ ಪೊಲೀಸರು ಟ್ವೀಟ್ ನಲ್ಲಿ ಖಚಿತಪಡಿಸಿದ್ದಾರೆ.
More Stories
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ