ಉತ್ತರ ಪ್ರದೇಶದ ಕುಶಿನಗರದಲ್ಲಿ ಭಾರತೀಯ ಜನತಾ ಪಕ್ಷ ಪರ ಪ್ರಚಾರ ನಡೆಸಿದ ಮುಸ್ಲಿಂ ವ್ಯಕ್ತಿಯನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.
ಮೃತ ದುರ್ದೈವಿಯನ್ನು ಬಾಬರ್ ಅಲಿ(25) ಹೇಳಲಾಗಿದೆ
ಚುನಾವಣಾ ಸಮಯದಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿದ್ದರು. ಅಲ್ಲದೇ ಇತ್ತೀಚೆಗೆ ರಾಜ್ಯದಲ್ಲಿ ಬಿಜೆಪಿ ಗೆಲುವನ್ನು ಆಚರಿಸಿದ್ದರು. ಹೀಗಾಗಿ ಭಾನುವಾರ ಬಾಬರ್ ಅಲಿಯನ್ನು ನೆರೆಹೊರೆಯವರು ಥಳಿಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾರ್ಚ್ 20 ರಂದು ಬಾಬರ್ ಅಲಿ ಅವರನ್ನು ಕಥರ್‍ಗರ್ಹಿಯಲ್ಲಿ ಥಳಿಸಲಾಯಿತು. ನಂತರ ಅವರನ್ನು
ಲಕ್ನೋದ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಭಾನುವಾರ ಬಾಬರ್ ಅಲಿ ಮೃತದೇಹವನ್ನು ಅವರ ಸ್ವಗ್ರಾಮಕ್ಕೆ ಕೊಂಡೊಯ್ಯಲಾಗಿತ್ತು. ಆದರೆ ಅವರ ಕುಟುಂಬಸ್ಥರು ಅಂತ್ಯಕ್ರಿಯೆಯನ್ನು ಮಾಡಲು ನಿರಾಕರಿಸಿ, ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
More Stories
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ