ಕೊಂಡೋತ್ಸವ ನಡೆಯುತ್ತಿದ್ದ ವೇಳೆ ನಡೆದ ಅವಘಡದಿಂದ ಕಟ್ಟಡ ಒಂದರ ಸಜ್ಜ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿದಘಟನೆ ಮಂಡ್ಯಜಿಲ್ಲೆಯ ಮದ್ದೂರು ತಾಲೂಕಿನ ಹುಲಗೆರೆಪುರದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ
ಪುಟ್ಟಲಿಂಗಮ್ಮ(52) ಮೃತ ಮಹಿಳೆ. ಗ್ರಾಮದ ಬಸವೇಶ್ವರ ದೇವಾಲಯದ ಕೊಂಡೋತ್ಸವ ಇತ್ತು. ಈ ಕೊಂಡೋತ್ಸವ ನೋಡಲು ಹಳೆಯ ಕಟ್ಟಡದ ಮೇಲೆ ಜನರು ನಿಂತಿದ್ದರು.
ಹಳೆ ಕಟ್ಟಡವಾದ್ದರಿಂದ ಮನೆಯ ಸಜ್ಜ ಕುಸಿದು ಮಹಿಳೆ ಸಾವನ್ನಪ್ಪಿದ್ದಾಳೆ. ಈ ದುರ್ಘಟನೆಯಲ್ಲಿ ಸುಮಾರು 30 ರಿಂದ 40 ಜನರಿಗೆ ಗಾಯವಾಗಿದೆ. ಗಾಯಳುಗಳಿಗೆ ಮದ್ದೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾಧಿಕಾರಿ ಅಶ್ವಥಿ ಹಾಗೂ ಜಿಲ್ಲಾ ಆರೋಗ್ಯಧಿಕಾರಿ ಧನಂಜಯ್, ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಗಾಯಗೊಂಡವರಲ್ಲಿ 11 ಮಕ್ಕಳು ಕೂಡ ಇದ್ದಾರೆ ಎಂದು ಘಟನೆ ಬಗ್ಗೆ ಮಾಹಿತಿ ನೀಡಿರುವ ಡಿಸಿ ಅಶ್ವಥಿ ಈ ಘಟನೆಯಲ್ಲಿ 45ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
52 ವರ್ಷದ ಪುಟ್ಟಲಿಂಗಮ್ಮ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಗಾಯಗೊಂಡವರ ಆರೋಗ್ಯ ಸ್ಥಿರವಾಗಿದೆ. ಹಳೆಯ ಕಟ್ಟಡವಾಗಿತ್ತೆ ಎಂಬುದನ್ನು ಪರಿಶೀಲಿಸಿ ಕ್ರಮ ತೆಗೆದುಕೊಳ್ತೇವೆ ಎಂದಿದ್ದಾರೆ.
- ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
- ಕರ್ನಾಟಕ ಸೇರಿದಂತೆ 14 ರಾಜ್ಯಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
More Stories
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು