ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡು ದಿನ ಕರ್ನಾಟಕ ಪ್ರವಾಸ ಕಾರ್ಯಕ್ರಮದಲ್ಲಿ ಗುರುವಾರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರು.
ರಾಹುಲ್ ಗಾಂಧಿ ಅವರನ್ನು ಕ್ಯಾತಸಂದ್ರ ಟೋಲ್ ಗೇಟ್ ಬಳಿ ಅದ್ಧೂರಿಯಾಗಿ ಸ್ವಾಗತಿಸಿದರು.
ನಂತರ ಸಿದ್ದಗಂಗಾ ಮಠಕ್ಕೆ ಆಗಮಿಸಿದ ರಾಹುಲ್ ಗಾಂಧಿ ಶಿವಕುಮಾರ ಶ್ರೀಗಳ ಗದ್ದಿಗೆಗೆ ಪೂಜೆ ಸಲ್ಲಿಸಿದರು.
ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ, ಮಾಜಿ ಸಚಿವ ಎಂ.ಬಿ.ಪಾಟೀಲ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಹಲವರು ಸಾಥ್ ನೀಡಿದರು.
ಇದೇ ವೇಳೆ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಉಪಸ್ಥಿತರಿದ್ದರು.
ಹಣೆಗೆ ವಿಭೂತಿ ಇಟ್ಟಿಕೊಂಡು ರಾಹುಲ್ ಗಾಂಧಿ, ಧ್ಯಾನ ಕೇಂದ್ರಕ್ಕೆ ಭೇಟಿ ನೀಡಿದರು. ಸಿದ್ದಗಂಗಾ ಶ್ರೀಗಳ ಭೇಟಿ ಬಳಿಕ ಉಪಾಹಾರ ಸೇವಿಸಿದರು. ಇಡ್ಲಿ, ದೋಸೆ, ಉಪ್ಪಿಟ್ಟು, ಬೋಂದಿ-ಪಾಯಸ ಸೇವಿಸಿದರು.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
- 104ರನ್ಗೆ ಆಸ್ಟ್ರೇಲಿಯಾ ಆಲೌಟ್ ,ಬುಮ್ರಾಗೆ 5 ವಿಕೆಟ್
- ಚನ್ನಪಟ್ಟಣ: 4 ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ
More Stories
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
ಚನ್ನಪಟ್ಟಣ: 4 ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ