ರಾಜರಾಜೇಶ್ವರಿ ನಗರ ಉಪಕದನಕ್ಕೆ ಸ್ಪರ್ಧಾಳುಗಳು ಬಹುತೇಕ ಫಿಕ್ಸ್ ಆಗಿದ್ಧಾರೆ. ಮಾಜಿ ಶಾಸಕ ಮುನಿರತ್ನಗೆ ಬಿಜೆಪಿ ಟಿಕೆಟ್ ಕೊಡುವುದು ನಿಶ್ಚಿತವಾಗುತ್ತಿದ್ದಂತೆಯೇ ಜೆಡಿಎಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಕೃಷ್ಣಮೂರ್ತಿ ಜೆಡಿಎಸ್ ಅಭ್ಯರ್ಥಿಯಾಗಲಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಕೃಷ್ಣಮೂರ್ತಿ ತಂದೆ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದವರು. ಈಗ ಅವರ ಮಗನಿಗೆ ಟಿಕೆಟ್ ಕೊಟ್ಟಿದ್ದೇವೆ. ಕೃಷ್ಣಮೂರ್ತಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೆಚ್ಡಿಕೆ ಹೇಳಿದ್ದಾರೆ.
ಕೃಷ್ಣಮೂರ್ತಿ ಅವರ ತಂದೆ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. 2008ರ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತದೆಂದು ಆಸೆ ಪಟ್ಟಿದ್ದರು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಆ ಶಾಕ್ನಿಂದ ಅವರು ಹೃದಯಾಘಾತಕ್ಕೊಳಗಾಗಿ ಮೃತರಾದರು. ಆ ಕುಟುಂಬದ ಬಗ್ಗೆ ನನಗೆ ಅನುಕಂಪ ಇದೆ. ಕೃಷ್ಣಮೂರ್ತಿ ಸ್ವಂತ ದುಡಿಮೆಯಿಂದ ಬೆಳೆದಿದ್ದಾರೆ. ಅವರೂ ನಿಷ್ಠಾವಂತ ಜೆಡಿಎಸ್ ಕಾರ್ಯಕರ್ತರಾಗಿದ್ಧಾರೆ. ಹೀಗಾಗಿ ಅವರಿಗೆ ಟಿಕೆಟ್ ಕೊಡುತ್ತಿದ್ದೇವೆ ಎಂದಿದ್ದಾರೆ.
ಆರ್.ಆರ್. ನಗರ ಉಪಕದನದ ಸ್ಪರ್ಧಾಕಣದ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ತಮಗೆ ಎರಡೂ ರಾಷ್ಟ್ರೀಯ ಪಕ್ಷಗಳು ಸಮಾನ ವಿರೋಧಿಗಳು. ಎರಡೂ ಪಕ್ಷಗಳ ವಿರುದ್ಧ ನಮ್ಮ ಹೋರಾಟ ಇರುತ್ತದೆ. ಕಳೆದ ಎರಡು ಚುನಾವಣೆಗಳು ಬೇರೆ ಬೇರೆ ರೀತಿ ಆಗಿದೆ. ಈ ಬಾರಿ ಬೇರೆ ರೀತಿ ಚುನಾವಣೆ ಆಗುತ್ತೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
More Stories
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ