ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದ ಪ್ರಮುಖ ಸಾಕ್ಷಿ ಪ್ರಭಾಕರ್ ಹೃದಯಾಘಾತಕ್ಕೀಡಾಗಿ ಇಂದು ಸಾವನ್ನಪ್ಪಿದರು
ಚೆಂಬೂರಿನ ಮಹುಲ್ ಪ್ರದೇಶದ ತಮ್ಮ ನಿವಾಸದಲ್ಲಿ ಪ್ರಭಾಕರ್ ಸೈಲ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವಕೀಲ ತುಷಾರ್ ಖಂಡಾರೆ ತಿಳಿಸಿದ್ದಾರೆ.
ಪ್ರಭಾಕರ್ ಸೈಲ್ ಅವರ ಮೃತದೇಹವನ್ನು ಶನಿವಾರ ಅಂಧೇರಿಯಲ್ಲಿರುವ ಅವರ ಮನೆಗೆ ತಂದು ಅಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ತಿಳಿದುಬಂದಿದೆ.
ಸೈಲ್ ಅವರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸದ್ಯ ಅಂತ್ಯಕ್ರಿಯೆ ನಡೆಸಲು ಸೈಲ್ ಸಹೋದರನ ಬರುವಿಕೆಗಾಗಿ ಕುಟುಂಬಸ್ಥರು ಕಾಯುತ್ತಿದ್ದಾರೆ.
ಬಾಲಿವುಡ್‍ನಲ್ಲಿ ಬಿರುಗಾಳಿ ಎಬ್ಬಿಸಿದ್ದ ಕಾರ್ಡೆಲಿಯಾ ಕ್ರೂಸ್ ಡ್ರಗ್ ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ. ಈ ಪ್ರಕರಣದ ತನಿಖೆಯನ್ನು ಎನ್‍ಸಿಬಿ ಕೈಗೊಂಡಿದೆ. ಡ್ರಗ್ಸ್ ಪತ್ತೆ ಪ್ರಕರಣದಲ್ಲಿ ಆರ್ಯನ್ ಖಾನ್ ಕೂಡಾ ಆರೋಪಿಯಾಗಿದೆ , ಇದೇ ವೇಳೆ ಪ್ರಭಾಕರ್ ಸೈಲ್ ಹೆಸರು ಕೂಡ ಬೆಳಕಿಗೆ ಬಂದಿತ್ತು. ಡ್ರಗ್ಸ್ ಪ್ರಕರಣದ ಪ್ರಮುಖ ವ್ಯಕ್ತಿಯಾದ ಕಿರಣ್ ಗೋಸಾವಿ ಅವರ ಅಂಗರಕ್ಷಕರಾಗಿದ್ದ ಪ್ರಭಾಕರ್ ಸೈಲ್ ಅವರು ಎನ್‍ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ಸುಲಿಗೆ ಆರೋಪ ಮಾಡಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ