ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು ಉಂಟಾಗಿ, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಲ್ಲಡ್ಕದ ತನ್ನ ವಿದ್ಯಾಸಂಸ್ಥೆಯಲ್ಲಿದ್ದಾಗ ಪ್ರಭಾಕರ್ ಭಟ್‌ಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಮಂಗಳೂರಿಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ತಜ್ಞ ವೈದ್ಯರಿಂದ ಪ್ರಭಾಕರ್ ಭಟ್ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ.
ಕೆಲ ದಿನಗಳ ಹಿಂದೆ ಮಂಗಳೂರು ವಿವಿ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ ಉದ್ಘಾಟನೆಗೆ ಪ್ರಭಾಕರ್ ಭಟ್ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಈ ಹಿನ್ನೆಲೆ ಕಾರ್ಯಕ್ರಮಕ್ಕೆ ಪ್ರಭಾಕರ್ ಭಟ್ ಆಗಮಿಸಿದ್ದರುರೀ ವೇಳೆ ವಿಶ್ವವಿದ್ಯಾಲಯದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಗೋಬ್ಯಾಕ್ ಎಂದು ಪ್ರತಿಭಟನೆ ನಡೆಸಲಾಗಿತ್ತು
. ಮಂಗಳೂರಿನಲ್ಲಿ ಸಿಎಫ್‌ಐ ವಿದ್ಯಾರ್ಥಿ ಸಂಘಟನೆಯಿಂದ ಧರಣಿ ನಡೆಸಲಾಗಿತ್ತು. ಬುರ್ಖಾ ಧರಿಸಿ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯರು ಭಾಗಿಯಾಗಿದ್ದರು. ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಪೊಲೀಸರನ್ನು ತಳ್ಳಿಕೊಂಡು ಹೋಗಲು ವಿದ್ಯಾರ್ಥಿಗಳು ಯತ್ನಿಸಿದ್ದರು. ಈ ವೇಳೆ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು