ಅಲ್‌ಖೈದಾ ಸಂಘಟನೆಯನ್ನು ನಿಷೇಧ ಮಾಡಲಾಗಿದೆ. ಬ್ಯಾನ್ ಆದ ನಂತರ ಈ ವೀಡಿಯೋ ಎಲ್ಲಿಂದ ಬಂತು? ಹೇಗೆ ಬಂತು? ಕರ್ನಾಟಕದ ಮಂಡ್ಯ ಮೂಲದ ಮುಸ್ಕಾನ್‌ವರೆಗೂ ಹೇಗೆ ಬಂತು ಎನ್ನುವುದನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡು ವಿಚಾರಣೆ ನಡೆಸಬೇಕು.
ಮುಸ್ಕಾನ್ ಹಾಗೂ ಆಕೆಯ ತಂದೆಯನ್ನು ಬಂಧಿಸಬೇಕು. ಅವರ ಮನೆಗೆ ಯಾರೆಲ್ಲಾ ಭೇಟಿ ಕೊಟ್ಟಿದ್ದಾರೆ ಎಂಬ ವಿಚಾರಣೆ ನಡೆಯಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬೆಳಗಾವಿಯಲ್ಲಿ ಆಗ್ರಹಿಸಿದರು.
ಸುದ್ದಿಗಾರರ ಜೊತೆ ಮಾತಾಡಿದ ಮುತಾಲಿಕ್ ಮಹಾರಾಷ್ಟ್ರದ ಮುಸ್ಲಿಂ ಎಂಎಲ್‌ಎ ಬಂದು ಅವರಿಗೆ ಮೊಬೈಲ್ ಕೊಟ್ಟು ಹೋಗಿದ್ದಾರೆ. ಆ ಮೊಬೈಲ್ ಎಲ್ಲಿಂದ ಬಂತು ಎಂಬುದನ್ನು ತಿಳಿಯಬೇಕು. ತಕ್ಷಣ ಅದನ್ನು ಸೀಜ್ ಮಾಡಬೇಕು ಎಂದು ಹೇಳಿದರು.
ಅಲ್‌ಖೈದಾ ಜವಹರಿಗೆ ಭಾರತದಲ್ಲಿ ಮೂಗು ತೂರಿಸುವ ಅವಶ್ಯಕತೆ ಇಲ್ಲ. ನಮ್ಮ ದೇಶ ತಾಲಿಬಾನ್ ಅಲ್ಲ. ಕುರಾನ್ ಮೇಲೆ ನಮ್ಮ ದೇಶ ನಡೆಯಲ್ಲ. ಮುಸ್ಕಾನ್ ಹೊಗಳುವ ಅವಶ್ಯಕತೆ ಇಲ್ಲ ಎಂದರು.
ಮುಸ್ಕಾನ್ ಹೊಗಳಿ ಅಲ್‌ಖೈದಾ ಮುಖ್ಯಸ್ಥ ವೀಡಿಯೋ ಬಿಡುಗಡೆ ಮಾಡಿದ ವಿಚಾರವಾಗಿ, ಸಿದ್ದರಾಮಯ್ಯ ಆರ್‌ಎಸ್‌ಎಸ್ ಮಾಡಿಸಿದ ವೀಡಿಯೋ ಎಂಬ ಹೇಳಿಕೆ ನೀಡಿದ್ದರು.
ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಪ್ರಮೋದ್ ಮುತಾಲಿಕ್, ಅಲ್‌ಖೈದಾ ಜವಹರಿ ಮುಸ್ಕಾನ್ ಹೊಗಳಿದ್ದು ಅತ್ಯಂತ ಖಂಡನೀಯವಾದದ್ದು. ಈಸಂಗತಿಯನ್ನು ಅಷ್ಟು ಹಗುರವಾಗಿ ತೆಗೆದುಕೊಳ್ಳುವ ಹಾಗಿಲ್ಲ ಎಂದು ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ