ಕೊರೊನಾ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ರದ್ದು ಮಾಡಲಾಗಿದ್ದ ಅಮರನಾಥ ಯಾತ್ರೆಗೆ ಈ ವರ್ಷ ಚಾಲನೆ ನೀಡಲಾಗುವುದು.
ಏಪ್ರಿಲ್ 11 ರಿಂದ ಅಮರನಾಥ ಯಾತ್ರೆಗೆ ಭಕ್ತಾದಿಗಳು ನೋಂದಣಿ ಮಾಡಿಕೊಳ್ಳಬಹುದು ಎಂದು ಅಮರನಾಥಜೀ ಪುಣ್ಯ ಕ್ಷೇತ್ರದ ಸಿಇಓ ನಿತೀಶ್ವರ್ ಕುಮಾರ್ ತಿಳಿಸಿದ್ದಾರೆ.
ಜೂನ್ 30 ರಿಂದ ಆಗಸ್ಟ್ 11ರ ವರೆಗೂ ಯಾತ್ರೆ ನಡೆಸಲು ತೀರ್ಮಾನ ಮಾಡಲಾಗಿದೆ.
ಯಾತ್ರೆ ಕೈಗೊಳ್ಳುವ ಭಕ್ತಾದಿಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.
ಶ್ರೈನ್ ಬೋರ್ಡ್‍ನ ವೆಬ್‍ಸೈಟ್ ಅಥವಾ ಮೂಬೈಲ್ ಅಪ್ಲಿಕೇಶನ್ ಮೂಲಕ ನೋಂದಣಿ ಮಾಡಿಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ವರ್ಷ ಮೂರು ಲಕ್ಷ ಜನರು ಯಾತ್ರೆ ಮಾಡುವ ನಿರೀಕ್ಷೆಗಳಿದೆ. ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ 3,000 ಜನರು ಉಳಿದುಕೊಳ್ಳಲು ವ್ಯವಸ್ಥೆ ಇರುವ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗಿದೆ. ಅಲ್ಲಿ ಭಕ್ತಾಧಿಗಳು ತಂಗಲು ಅವಕಾಶ ಮಾಡಿಕೊಡಲಾಗಿದೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ