December 25, 2024

Newsnap Kannada

The World at your finger tips!

gujarat

ಗುಜರಾತ್ ನಲ್ಲಿ ಭೀಕರ ದುರಂತ – ಕೆಮಿಕಲ್ ಫ್ಯಾಕ್ಟರಿ ಸ್ಫೋಟಗೊಂಡು 6 ಮಂದಿ ಸಾವು

Spread the love

ಗುಜರಾತ್‌ನ ಭರೂಚ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದು ಮುಂಜಾನೆ ವೇಳೆ ಸ್ಫೋಟಗೊಂಡು , 6 ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಗುಜರಾತ್‌ನ ಭರೂಚ್ ಜಿಲ್ಲೆಯ ಜರುಗಿದೆ.

ಅಹಮದಾಬಾದ್‌ನಿಂದ ದಹೇಜ್ ಕೈಗಾರಿಕಾ ಪ್ರದೇಶದ ಘಟಕದಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದ ವೇಳೆ ದ್ರಾವಕ ಭಟ್ಟಿ ಇಳಿಸುವ ಪ್ರಕ್ರಿಯೆಯಲ್ಲಿ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ ಎಂದು ಭರೂಚ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ತಿಳಿಸಿದ್ದಾರೆ.

ರಿಯಾಕ್ಟರ್‌ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದಾಗಿ ಅಲ್ಲೇ ಇದ್ದ 6 ಮಂದಿ ಮೃತಪಟ್ಟಿದ್ದಾರೆ.

ನಂತರ ಬೆಂಕಿಯನ್ನು ನಿಯಂತ್ರಿಸಿ, ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದರ ಹೊರತಾಗಿ ಯಾರೂ ಗಾಯಗೊಂಡಿಲ್ಲ ಎಂದು ಮಾಹಿತಿ ನೀಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!