December 25, 2024

Newsnap Kannada

The World at your finger tips!

hindu rastra

ಭಾರತ ಶೀಘ್ರದಲ್ಲೇ ಹಿಂದೂ ರಾಷ್ಟ್ರ : ಎಂದು ಹಾಡಿದ್ದ ಬಿಜೆಪಿ MLA ವಿರುದ್ಧ ದೂರು ದಾಖಲು

Spread the love

ಭಾರತ ಶೀಘ್ರದಲ್ಲೇ ಹಿಂದೂ ರಾಷ್ಟ್ರವಾಗಲಿದೆ ಎಂದು ಹಾಡಿದ್ದ ಬಿಜೆಪಿ ಶಾಸಕ ಟಿ. ರಾಜಾ ವಿರುದ್ಧ ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ಉಂಟು ಮಾಡಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೈದರಾಬಾದ್‍ನಲ್ಲಿ ರಾಮನವಮಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ರಾಜ ಅವರು ಹಿಂದೂ ರಾಷ್ಟ್ರದ ಬಗ್ಗೆ ಒಂದು ಹಾಡನ್ನು ಹಾಡಿದ್ದರು.

ಅದರಲ್ಲಿ ಭಾರತವು ಶೀಘ್ರದಲ್ಲೇ ಹಿಂದೂ ರಾಷ್ಟ್ರವಾಗಲಿದೆ. ಶ್ರೀರಾಮನ ಹೆಸರನ್ನು ತೆಗೆದುಕೊಳ್ಳದವರು ಭಾರತದಿಂದ ಹೊರಗೆ ಹೋಗಬೇಕಾಗುತ್ತದೆ ಎಂದು ಹೇಳಿದ್ದರು.

ಅಯೋಧ್ಯೆಯಲ್ಲಿ ರಾಮ ಮಂದಿರ ಆಗಿದೆ. ಈಗ ಮಥುರಾ ಮತ್ತು ಕಾಶಿ ಎಂದ ಅವರು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಲ್ಡೋಜರ್ ಅನ್ನು ಸ್ವಚ್ಛಗೊಳಿಸಲು ಬಳಸುತ್ತಾರೆ. ಭಾರತವು ಶೀಘ್ರದಲ್ಲೇ ಹಿಂದೂ ರಾಷ್ಟ್ರವಾಗಲಿದೆ.

ಅದೇ ಹಾಡಿನಲ್ಲಿ ರಾಮನ ಹೆಸರನ್ನು ತೆಗೆದುಕೊಳ್ಳದವರು ಮುಂದಿನ ದಿನಗಳಲ್ಲಿ ಭಾರತದಿಂದ ಓಡಿಹೋಗಬೇಕಾಗುತ್ತದೆ ಎಂದು ತಿಳಿಸಿದ್ದರು.

ಈ ಹಾಡಿಗೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಹೈದರಾಬಾದ್‍ನ ಪೊಲೀಸರು ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವ ಆರೋಪದ ಮೇಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!