ನನ್ನ ಗಂಡ ಯಾವಾಗಲೂ ಬಿಜೆಪಿ ಕಾರ್ಯಕರ್ತ ಎಂದು ಎಲ್ಲರ ಬಳಿ ಹೇಳಿಕೊಳ್ಳುತ್ತಿದ್ದರು. ಆದರೆ ಇಂದು ಅದೇ ಬಿಜೆಪಿ ನನ್ನ ಗಂಡನನ್ನು ಸಮಾಧಿ ಮಾಡಿಬಿಟ್ಟಿತು ಎಂದು ಮೃತ ಗುತ್ತಿಗೆದಾರ ಸಂತೋಷ್ ಪತ್ನಿ ಜಯಶ್ರೀ ಕಣ್ಣೀರು ಹಾಕಿದ್ದಾರೆ.
ಸುದ್ದಿಗಾರರಜೊತೆ ಮಾತನಾಡಿದ ಜಯಶ್ರೀ, ನನ್ನ ಪತಿ ಈಶ್ವರಪ್ಪ ಭರವಸೆ ಮೇಲೆಯೇ ಕೆಲಸ ಮಾಡುತ್ತಿದ್ದರು. ಕಳೆದ ವಾರದಿಂದ ಅವರು ಕಾಮಗಾರಿಯ ಬಿಲ್ ಪಾಸ್ ಮಾಡುತ್ತಿಲ್ಲ. ಶೇ.40 ರಷ್ಟು ಲಂಚ ಕೊಟ್ಟರೆ ಮಾತ್ರವೇ ಬಿಲ್ ಪಾಸ್ ಮಾಡುತ್ತೇನೆ ಎಂದಿದ್ದರು.
ಈ ವಿಚಾರವಾಗಿ ಈಶ್ವರಪ್ಪನ ಬಳಿ ಮಾತನಾಡಲು ಹೋದಾಗ ಬೆಳಗ್ಗೆ ಬನ್ನಿ, ಸಂಜೆ ಬನ್ನಿ ಎಂದು ಹೇಳಿ ಆಟ ಆಡಿಸುತ್ತಿದ್ದರು ಎಂದು ಗಂಭೀರ ಆರೋಪ ಮಾಡಿದರು.
ಬಿಜೆಪಿ ಸರ್ಕಾರಕ್ಕಾಗಿ ಕಷ್ಟ ಪಟ್ಟು ನನ್ನ ಪತಿ ಕೆಲಸ ಮಾಡುತ್ತಿದ್ದರು. ಕೆಲಸದ ಬರದಲ್ಲಿ ದಿನಕ್ಕೆ ಕೇವಲ ಒಂದೇ ಬಾರಿ ಊಟ ಮಾಡುತ್ತಿದ್ದರು. ಬಿಜೆಪಿಗಾಗಿ ನಿಯತ್ತಿನಲ್ಲಿ ಕೆಲಸ ಮಾಡುತ್ತಿದ್ದ ನನ್ನ ಪತಿಯನ್ನು ಅವರು ಈತ ಬಿಜೆಪಿ ಕಾರ್ಯಕರ್ತನೇ ಅಲ್ಲ. ಸಂತೋಷ್ ಯಾರು ಎಂಬುದೇ ಗೊತ್ತಿಲ್ಲ ಎಂದಿದ್ದಾರೆ. ಯಾರು ಎಂಬುದೇ ಗೊತ್ತಿಲ್ಲ ಎಂದಾದರೆ ಫೋಟೋದಲ್ಲಿ ಹೇಗೆ ತಾನೆ ಕಾಣಿಸಿಕೊಳ್ಳಲು ಸಾಧ್ಯ ಎಂದು ಪ್ರಶ್ನಿಸಿ ಆಕ್ರೋಶ ಹೊರ ಹಾಕಿದರು.
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ