ಜೋ ರೂಟ್ ಇಂಗ್ಲೆಂಡ್ ತಂಡದ ಟೆಸ್ಟ್ ನಾಯಕತ್ವ ತೊರೆದ ಬಳಿಕ ಹೊಸ ನಾಯಕನ ಹುಡುಕಾಟದಲ್ಲಿ ರುವ ಇಂಗ್ಲೆಂಡ್ ತಂಡದಲ್ಲಿರುವ ಆಲ್‍ರೌಂಡರ್ ಬೆನ್ ಸ್ಟೋಕ್ಸ್‌ಗೆ ನಾಯಕನ ಪಟ್ಟ ಕಟ್ಟುವ ಕೂಗು ಕೇಳಿಬರುತ್ತಿದೆ.
5 ವರ್ಷಗಳ ಕಾಲ ಇಂಗ್ಲೆಂಡ್ ಟೆಸ್ಟ್ ತಂಡವನ್ನು ನಾಯಕನಾಗಿ ಮುನ್ನಡೆಸಿದ ಜೋ ರೂಟ್ ನಿನ್ನೆ ನಾಯಕತ್ವಕ್ಕೆ ಗುಡ್ ಬೈ ಹೇಳಿದರು.
ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ನೂತನ ನಾಯಕನನ್ನು ನೇಮಿಸುವ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದೆ.
ಈ ನಡುವೆ ತಂಡದಲ್ಲಿರುವ ಆಲ್‍ರೌಂಡರ್ ಬೆನ್ ಸ್ಟೋಕ್ಸ್‌ರನ್ನು ನಾಯಕನ್ನಾಗಿ ನೇಮಿಸಬೇಕೆಂಬ ಅಭಿಪ್ರಾಯವನ್ನು ಮಾಜಿ ಆಟಗಾರರು ವ್ಯಕ್ತಪಡಿಸಿದ್ದಾರೆ.
ಬೆನ್ ಸ್ಟೋಕ್ಸ್ ಹೊರತು ಪಡಿಸಿ ಇಂಗ್ಲೆಂಡ್ ತಂಡದಲ್ಲಿರುವ ಹಿರಿಯ ಆಟಗಾರ ಸ್ಟುವರ್ಟ್ ಬ್ರಾಡ್‍ಗೆ ನಾಯಕತ್ವ ವಹಿಸಬಹುದು ಎಂಬ ಅಭಿಪ್ರಾಯವು ಇದೆ.
ಇದೀಗ ಆಸ್ಟ್ರೇಲಿಯಾ ತಂಡ ವೇಗಿ ಪ್ಯಾಟ್ ಕಮ್ಮಿನ್ಸ್‌ಗೆ ನಾಯಕತ್ವ ವಹಿಸಿಕೊಟ್ಟು ಯಶಸ್ವಿಯಾಗಿದೆ. ಹಾಗಾಗಿ ಇಂಗ್ಲೆಂಡ್ ತಂಡ ಕೂಡ ಬೌಲರ್‌ಗೆ ನಾಯಕತ್ವವನ್ನು ವಹಿಸಿ ಪ್ರಯೋಗ ನಡೆಸಲು ಮನಸು ಮಾಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ