ರಸ್ತೆ ಅಪಘಾತದಲ್ಲಿ ಗಾಯಗೊಂಡು ಪತಿ ಸಾವನ್ನಪ್ಪಿದ ಸುದ್ದಿ ತಿಳಿದು ಪತ್ನಿಯೂ ಸಹ ಐದು ತಿಂಗಳ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ರಾಯಚೂರಿನ ಲಿಂಗಸೂಗೂರು ಪಟ್ಟಣದಲ್ಲಿ ಜರುಗಿದೆ.
ಮೃತರನ್ನು ಶೃತಿ(30) ಮತ್ತು 5 ತಿಂಗಳ ಮಗು ಅಭಿರಾಮ್ ಎಂದು ಗುರುತಿಸಲಾಗಿದೆ.
ಮಂಗಳೂರು ಜಿಲ್ಲೆಯ ಅಗ್ನಿಶಾಮಕ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪತಿ ಗಂಗಾಧರ್ ಶನಿವಾರ ರಸ್ತೆ ಅಪಘಾತದಲ್ಲಿ ಸಾವನ್ನಪಿದ್ದರು.
ಈ ಸುದ್ದಿ ತಿಳಿದು ಪತ್ನಿ ಶೃತಿ ದಿಕ್ಕು ಕಾಣದೇ ಮನನೊಂದು ಮನೆಯ ಕಿಟಕಿಗೆ ಐದು ತಿಂಗಳ ಮಗುವಿಗೆ ನೇಣು ಹಾಕಿ ಕೊಂದು ಆ ಬಳಿಕ ಮನೆಯಲ್ಲಿನ ಫ್ಯಾನ್‍ಗೆ ತಾನು ಕೂಡ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ.
ಮಾಹಿತಿ ತಿಳಿದು ಸ್ಥಳಕ್ಕೆ ಲಿಂಗಸೂಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಿಂಗಸೂಗೂರು ಡಿವೈಎಸ್‍ಪಿ ಎಸ್.ಎಸ್. ಹೂಲ್ಲೂರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ