ಮಂಗಳೂರಿನ ಹೊರ ವಲಯದ ಫ್ಯಾಕ್ಟರಿಯೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ
ಹೊರವಲಯದ ಎಸ್‌ಇಝೆಡ್ ವ್ಯಾಪ್ತಿಯ ಮೀನಿನ ಫ್ಯಾಕ್ಟರಿಯಲ್ಲಿ ಕಾರ್ಮಿಕರು ಟ್ಯಾಂಕ್ ಶುಚಿಗೊಳಿಸುತ್ತಿದ್ದ ಸಂದರ್ಭದಲ್ಲಿ ವಿಷಾನಿಲ ಸೋರಿಕೆಯಾಗಿ ಈ ದುರಂತ ಸಂಭವಿಸಿದೆ
ಈಘಟನೆಯಲ್ಲಿ ಪಶ್ಚಿಮ ಬಂಗಾಳ ಮೂಲದ ಸಮಿರುಲ್ಲ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಸಾಜ್ ಮೃತಪಟ್ಟಿದ್ದಾರೆ. ಮಿರಾಜುಲ್ಲ್ ಇಸ್ಲಾಂ, ಸರಾಫತ್ ಆಲಿ, ಅಜನ್ ಆಲಿ, ಕರೀಬುಲ್ಲ, ಅಫ್ತಲ್ ಮಲ್ಲಿಕ್ ಸೇರಿದಂತೆ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ.
ಭಾನುವಾರ ರಾತ್ರಿ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದ. ಈ ವೇಳೆ ಏಕಾಏಕಿ ಅಸ್ವಸ್ಥಗೊಂಡು ಬಿದ್ದಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು 8 ಮಂದಿ ಕಾರ್ಮಿಕರು ಹೋಗಿದ್ದು, ಅವರೆಲ್ಲರ ಉಸಿರಾಟದಲ್ಲಿ ಏರುಪೇರು ಉಂಟಾಗಿ ಅಸ್ವಸ್ಥಗೊಂಡಿದ್ದಾರೆ.
ಅಸ್ವಸ್ಥಗೊಂಡ ಎಲ್ಲಾ ಕಾರ್ಮಿಕರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿಸಿಪಿ ಹರಿರಾಂ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
- ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಹುಡುಕಾಟ ಸ್ಥಗಿತ
- ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು
- ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ ವಿದ್ಯಾರ್ಥಿ ದುರ್ಮರಣ
- ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ 89 ಉದ್ಯೋಗಾವಕಾಶ
- ಕೆನರಾ ಬ್ಯಾಂಕ್ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ
- ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
More Stories
ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಹುಡುಕಾಟ ಸ್ಥಗಿತ
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು
ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ ವಿದ್ಯಾರ್ಥಿ ದುರ್ಮರಣ