ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹಿರಿಯ ಕೆಎಎಸ್ ಅಧಿಕಾರಿಯನ್ನು ರಾಜ್ಯ ಸರ್ಕಾರ ಅಮಾನತ್ತು ಮಾಡಿದೆ.
ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿ ಎಲಿಷಾ ಆಂಡ್ರೂಸ್ ಅವರನ್ನು ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿದೆ.
ನಗರಾಭಿವೃದ್ಧಿ ಇಲಾಖೆಯಲ್ಲಿ ಉಪಕಾರ್ಯದರ್ಶಿ-3 ಹುದ್ದೆಯಲ್ಲಿ ಎಲಿಷಾ ಕಾರ್ಯನಿರ್ವಹಿಸುತ್ತಿದ್ದರು.
ಬಿಬಿಎಂಪಿ ಇಂಜಿನಿಯರ್‌ಗಳ ಪದೋನ್ನತಿಗೆ ಸಂಬಂಧಿಸಿದಂತೆ ಇಂಜಿನಿಯರ್‌ಗಳಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದಲ್ಲದೇ ಕಡತ ವಿಲೇವಾರಿಯಲ್ಲಿ ನಿಯಮ ಉಲ್ಲಂಘಿಸಿದ ಆರೋಪವನ್ನು ಎಲಿಷಾ ಆಂಡ್ರೂಸ್ ಎದುರಿಸುತ್ತಿದ್ದಾರೆ.
ಈ ಅಧಿಕಾರಿ ವಿರುದ್ದ ದೂರು ಬಂದ ಹಿನ್ನೆಲೆಯಲ್ಲಿ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತನಿಖೆಗೆ ಆದೇಶಿಸಿದ್ದರು.
ಮೇಲ್ನೋಟಕ್ಕೆ ಆರೋಪ ನಿಜವೆಂದು ಕಂಡ ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಜರುಗಿಸಿದೆ. ಅಲ್ಲದೇ ಅಧಿಕಾರಿ ತಮ್ಮ ಮೇಲಿನ ಆರೋಪ ನಿರಾಕರಿಸಿಲ್ಲ ಎಂದು ಸರ್ಕಾರ ತಿಳಿಸಿದೆ.
ಅಮಾನತ್ತಾಗಿರುವ ಈ ಎಲಿಷಾ ಆಂಡ್ರೂಸ್ ರಾಜ್ಯ ಕೆಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾಗಿದ್ದಾರೆ. ಶೇ 40 ರಷ್ಟು ಭ್ರಷ್ಟಾಚಾರ ಆರೋಪಗಳ ನಡುವೆ ಸರ್ಕಾರ ಹಿರಿಯ ಅಧಿಕಾರಿಯ ತಲೆ ದಂಡ ಮಾಡಿರುವುದು ಮಹತ್ವ ಪಡೆದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು