ಪಿಎಸ್‌ಐ ನೇಮಕಾತಿ ಆದೇಶ ಕೈ ಸೇರುವ ಮುನ್ನವೇ ಪಿಎಸ್‍ಐ ಸಮವಸ್ತ್ರ ಹಾಕಿಕೊಂಡು ಪೇದೆಯೊಬ್ಬ ಬಿಲ್ಡಪ್ ಕೊಟ್ಟ ಘಟನೆ ಹಾವೇರಿ ತಾಲೂಕಿನ ಗುಡಸಲಕೊಪ್ಪ ಗ್ರಾಮದಲ್ಲಿ ಜರುಗಿದೆ.
ಗ್ರಾಮದ ಬಸನಗೌಡ ಕರೇಗೌಡ ಪಿಎಸ್‍ಐ ಸಮವಸ್ತ್ರ ಹಾಕಿಕೊಂಡು ಬಿಲ್ಡ್‌ಪ್ ಕೊಟ್ಟಿದ್ದಾರೆ. ಜನವರಿ 19 ರಂದು ಬಿಡುಗಡೆಯಾಗಿದ್ದ ಪಿಎಸ್‍ಐ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಬಸನಗೌಡ 27ನೇ ರ‍್ಯಾಂಕ್‍ನಲ್ಲಿದ್ದರು ಎನ್ನಲಾಗಿದೆ.
545 ಪಿಎಸ್‍ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿಯಲ್ಲಿ ಆಯ್ಕೆಯಾಗಿದ್ದಾರೆ
ಸದ್ಯ ಬೆಂಗಳೂರಿನ ವಿವೇಕನಗರ ಪೊಲೀಸ್ ಠಾಣೆಯಲ್ಲಿ ಕಾನ್‍ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಪಿಎಸ್‍ಐ ಸೆಲೆಕ್ಷನ್ ಆಗಿದ್ದಕ್ಕೆ ಗ್ರಾಮದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಿಎಸ್‍ಐ ಡ್ರೆಸ್ ಹಾಕ್ಕೊಂಡು ಬಸನಗೌಡ ಭಾಗವಹಿಸಿ ಭಾಷಣ ಮಾಡಿದ್ದರು. ಈ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಆಗಿ ವೈರಲ್ ಆಗಿದೆ.
ಏಪ್ರಿಲ್ 20 ರಂದು ತನಿಖೆಗೆ ಹಾಜರಾಗುವಂತೆ ಸಿಐಡಿ ಸಹಾಯಕ ತನಿಖಾಧಿಕಾರಿಗಳು ನೋಟಿಸ್ ನೀಡಿದ್ದಾರೆ. ಐವತ್ತು ಜನರಿಗೆ ನೀಡಿದ್ದ ನೋಟಿಸ್ ಪಟ್ಟಿಯಲ್ಲಿದ್ದ ಬಸನಗೌಡ ಕರೇಗೌಡ ಹೆಸರು ಸಹ ಇದೆ.
ಅ.3 ರಂದು ಪಿಎಸ್‍ಐ ನೇಮಕಾತಿ ಪರೀಕ್ಷೆಯನ್ನು ಬಸನಗೌಡ ಬರೆದಿದ್ದರು. ಈಗ ಬೆಂಗಳೂರಿನಲ್ಲಿ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು