ಅ. 17ರಿಂದ ನವರಾತ್ರಿ ಉತ್ಸವ ಆರಂಭವಾಗಲಿದೆ. ಈ ಬಾರಿ ವರ್ಚುವಲ್ ದಸರಾ ಆಚರಿಸಲು ನಿರ್ಧರಿಸಲಾಗಿದೆ.
ಇದರ ನಡುವೆ 8 ದಿನಗಳ ಕಾಲ ಮೈಸೂರಿನ ಅರಮನೆ ಬಳಿ ನಡೆಯುವ ದಸರಾ ಸಾಂಸ್ಕೃತಿಕ ಉತ್ಸವದಲ್ಲಿ ಒಂದು ದಿನವನ್ನು ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಮೀಸಲಿಡಲು ನಿರ್ಧರಿಸಲಾಗಿದೆ.
ಅ. 21ರಂದು ದಸರಾ ಸಾಂಸ್ಕೃತಿಕ ಉತ್ಸವದಲ್ಲಿ ಎಸ್ಬಿ ಬಾಲಸುಬ್ರಹ್ಮಣ್ಯ ನುಡಿನಮನ ಇರಲಿದೆ.
ಇತ್ತೀಚೆಗೆ ನಿಧನರಾದ ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ನೆನಪಿಗಾಗಿ
ಮೈಸೂರು ಅರಮನೆ ಮುಂಭಾಗದಲ್ಲಿ ನಡೆಯುವ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಸ್ಪಿಬಿ ನುಡಿ ನಮನ ಏರ್ಪಡಿಸಲಾಗಿದೆ. ಅ. 21ರಂದು ಗಾಯಕ ರಾಜೇಶ್ ಕೃಷ್ಣನ್ ತಂಡದವರು ಎಸ್‌ಪಿ ಬಾಲಸುಬ್ರಹ್ಮಣ್ಯಂ ಹಾಡಿರುವ ಗೀತೆಗಳನ್ನು ಹಾಡುವ ಮೂಲಕ ನುಡಿನಮನ ಸಲ್ಲಿಸಲಿದ್ದಾರೆ.
ಮೈಸೂರು ದಸರಾದ ಇದೇ ವೇದಿಕೆಯಲ್ಲಿ ಈ ಹಿಂದೆ ಎಸ್‌ಪಿ ಬಾಲಸುಬ್ರಹ್ಮಣ್ಯಂ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಈ ವರ್ಷದ ದಸರಾದಲ್ಲಿ ಎಸ್‌ಪಿ ಬಾಲಸುಬ್ರಹ್ಮಣ್ಯಂ ಗೌರವಾರ್ಥವಾಗಿ ನುಡಿನಮನ ಕಾರ್ಯಕ್ರಮ ಆಯೋಜಿಸಲಾಗಿದೆ. 8 ದಿನಗಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಒಂದು ದಿನವನ್ನು ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಮೀಸಲಿಡಲಾಗುವುದು.
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್