ಭಾರತದ ಮಾಜಿ ಕ್ರಿಕೆಟಿಗ 66 ವರ್ಷದ ಅರುಣ್ ಲಾಲ್ ತಮ್ಮ ಬಹುಕಾಲದ ಗೆಳತಿ 38 ವರ್ಷದ ಬುಲ್ ಬುಲ್ ಸಹಾ ಅವರನ್ನು ಮದುವೆಯಾಗಲು ಸಿದ್ಧರಾಗಿದ್ದಾರೆ.
ಅರುಣ್ ಲಾಲ್ (66) ಪ್ರಸ್ತುತ ಪಶ್ಚಿಮ ಬಂಗಾಳದ ಮುಖ್ಯ ಕೋಚ್ ಆಗಿದ್ದಾರೆ. ಮೇ 2ರಂದು ಶಿಕ್ಷಕಿ ಬುಲ್ ಬುಲ್ ಸಹಾ (38) ಅವರೊಂದಿಗೆ ದಾಪಂತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಲಾಲ್ ಮತ್ತು ಸಹಾ ಬಹುಕಾಲದಿಂದ ಸಂಬಂಧ ಹೊಂದಿದ್ದರು. ಲಾಲ್ ಅವರ ಮೊದಲ ಪತ್ನಿ ರೀನಾ ಅವರಿಂದ ಒಪ್ಪಿಗೆ ಪಡೆದ ನಂತರವೇ ಅವರು ಈ 2ನೇ ಮದುವೆಗೆ ಮುಂದಾಗಿದ್ದಾರೆ.
ಈಗಾಗಲೇ ಲಾಲ್ ತಮ್ಮ ಮೊದಲ ಪತ್ನಿಯೊಂದಿಗೆ ವಿಚ್ಛೇದನ ಪಡೆದಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಮೊದಲ ಪತ್ನಿಯೊಂದಿಗೆ ಸದ್ಯಕ್ಕೆ ಲಾಲ್ ವಾಸಿಸುತ್ತಿದ್ದಾರೆ. ಲಾಲ್ ಅವರ ಮುದುವೆಯ ಆಮಂತ್ರಣ ಪತ್ರಿಕೆಯ ಚಿತ್ರವೂ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅರುಣ್ ಮತ್ತು ಸಹಾ ಅವರು ಮುಂದಿನ ತಿಂಗಳ ಆರಂಭದಲ್ಲಿ ಕೋಲ್ಕತ್ತಾದ ಪೀರ್‍ಲೆಸ್ ಇನ್ ಎಸ್‍ಪ್ಲೇನೇಡ್‍ನಲ್ಲಿ ಸಪ್ತಪದಿ ತುಳಿಯಲಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ದಿಢೀರ್ ವಿದಾಯ
ಪಿ.ವಿ ಸಿಂಧು ಡಿ.22 ರಂದು ಹಸೆಮಣೆ ಏರಲಿದ್ದಾರೆ
ಆಸ್ಟ್ರೇಲಿಯ ವಿರುದ್ಧ ಭರ್ಜರಿ ಗೆಲುವು: ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಕನಸು ಜೀವಂತ