ಚೀನಿಯರ ನೆತ್ತರು ವ್ಯರ್ಥವಾಗಲು ಬಿಡಲ್ಲ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರರು ಪಾಕಿಸ್ತಾನದಲ್ಲಿ ಕೆಲಸ ಮಾಡುತ್ತಿರುವ ಚೀನಾದ ಪ್ರಜೆಗಳ ಮೇಲಿನ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ.
ಕರಾಚಿ ವಿಶ್ವವಿದ್ಯಾನಿಲಯದಲ್ಲಿ ಮೂವರು ಚೀನೀ ಶಿಕ್ಷಕರನ್ನು ಕೊಂದು ಇನ್ನೊಬ್ಬರನ್ನು ಗಾಯಗೊಳಿಸಿದ ದಾಳಿ ನಿನ್ನೆ ನಡೆದಿದೆ.
ಈ ದಾಳಿಯ ಹಿಂದೆ ಇರುವ ದುಷ್ಕರ್ಮಿಗಳ ಬಗ್ಗೆ ಸಮಗ್ರವಾಗಿ ತನಿಖೆಯಾಗಬೇಕು. ಆರೋಪಿಗಳಿಗೆ ಸರಿಯಾದ ಶಿಕ್ಷೆ ವಿಧಿಸುಬೇಕು ಎಂದು ಚೀನಾ ಬುಧವಾರ ಪಾಕಿಸ್ತಾನಕ್ಕೆ ಒತ್ತಾಯಿಸಿದೆ.
ಪಾಕ್‍ನಲ್ಲಿ ಕೆಲಸ ಮಾಡುತ್ತಿರುವ ಚೀನಿ ಪ್ರಜೆಗಳ ಭದ್ರತೆಯನ್ನು ಹೆಚ್ಚಿಸುವಂತೆ ಒತ್ತಾಯಿಸಿದೆ.
ಕರಾಚಿಯ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿರುವ ಕನ್ಫ್ಯೂಷಿಯಸ್ ಇನ್‍ಸ್ಟಿಟ್ಯೂಟ್‍ನ ಶಟಲ್ ಪ್ಯಾಸೆಂಜರ್ ವ್ಯಾನ್‍ನಲ್ಲಿ ಮಂಗಳವಾರ ಬುರ್ಖಾ ಧರಿಸಿದ ಬಲೂಚ್ ಮಹಿಳೆ ಆತ್ಮಾಹುತಿ ಬಾಂಬರ್ ಧರಿಸಿ ವ್ಯಾನ್‍ನಲ್ಲಿ ಕುಳಿತ್ತಿದ್ದಳು.
ನಂತರ ಮಹಿಳೆ ಧರಿಸಿದ್ದ ಆತ್ಮಾಹುತಿ ಬಾಂಬರ್ ಸ್ಫೋಟಗೊಂಡಿದೆ. ಪರಿಣಾಮ ವ್ಯಾನ್‍ನಲ್ಲಿದ್ದ ಮೂವರು ಚೀನೀ ಶಿಕ್ಷಕರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಈ ಬಾಂಬ್ ದಾಳಿ ಚೀನೀ ಶಿಕ್ಷಕರನ್ನೆ ಗುರಿಯಾಗಿಟ್ಟುಕೊಂಡು ಉದ್ದೇಶಪೂರ್ವವಾಗಿ ನಡೆಸಲಾಗಿದೆ ಎಂದು ಎಲ್ಲಕಡೆ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆ ಪಾಕ್ ವಿರುದ್ಧ ಚೀನಾ ಕಿಡಿಕಾರುತ್ತಿದೆ.
- ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
- 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
- ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಪಾಕ್-ಪಾಕ್ china blast
More Stories
ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ