March 13, 2026

Newsnap Kannada

The World at your finger tips!

6 TERRIS

ಹಾಸ್ಟೆಲ್ ನ 6 ನೇ ಮಹಡಿಯಿಂದ ಬಿದ್ದು ಉಗಾಂಡ ಮೂಲದ ವಿದ್ಯಾರ್ಥಿನಿ ಸಾವು

Spread the love

ಗೀತಂ ಯೂನಿವರ್ಸಿಟಿ ಹಾಸ್ಟೆಲ್​ನ 6 ನೇ ಮಹಡಿಯಿಂದ ವಿದ್ಯಾರ್ಥಿನಿಯೋರ್ವಳು ಅನುಮಾನಾಸ್ಪದವಾಗಿ ಬಿದ್ದು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಬಳಿಯ ಗೀತಂ ಯೂನಿವರ್ಸಿಟಿಯಲ್ಲಿ ನಡೆದಿದೆ. ಉಗಾಂಡ ಮೂಲದ ಹಸೀನಾ (24) ಮೃತ ದುರ್ದೈವಿ.

ಗೀತಂ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದರು. ರಾತ್ರಿ 11 ಗಂಟೆ ಸುಮಾರಿಗೆ 6ನೇ ಮಹಡಿಯಿಂದ ಮೊದಲನೇ ಮಹಡಿಗೆ ವಿದ್ಯಾರ್ಥಿನಿ ಬಿದ್ದಿದ್ದಾಳೆ. ಕೂಡಲೇ ಆಕೆಯನ್ನ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಯಿತು. ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾಳೆ.

ವಿದ್ಯಾರ್ಥಿನಿ ಸಾವಿನ ಬೆನ್ನಲ್ಲೇ ಅಲ್ಲಿರುವ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ವಿವಿ ಕಟ್ಟಡದ ಗ್ಲಾಸ್​ಗಳನ್ನು ಪುಡಿಪುಡಿ ಮಾಡಿದ್ದಾರೆ. ಕಲ್ಲು ಮತ್ತು ಸಿಕ್ಕ ಸಿಕ್ಕ ವಸ್ತುಗಳಿಂದ ಹೊಡೆದು ಪುಡಿ ಪುಡಿ ಮಾಡಿದ್ದಾರೆ.

ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರಬಹುದಾ ಅನ್ನುವ ಶಂಕೆಯೂ ಇದೆ.

error: Content is protected !!