January 8, 2025

Newsnap Kannada

The World at your finger tips!

divya a

ಸದಾ ಎಸಿ ರೂಂ ನಲ್ಲೇ ಕಾಲ ಕಳೆಯುತ್ತಿದ್ದ ದಿವ್ಯಾ ಪೋಲಿಸ್ ಕಸ್ಟಡಿಯಲ್ಲೂ ಹೈಡ್ರಾಮ !

Spread the love

ಐಷಾರಮಿ ಬದುಕಿಗೆ ಒಗ್ಗಿ ಹೋಗಿದ್ದ ಕಲಬುರಗಿ ದಿವ್ಯಾ ಹಾಗರಗಿ ಸದಾ ಎಸಿ ಕೋಣೆಯಲ್ಲಿ ಮಲಗುತ್ತಿದ್ದರು. ಆದರೆ ದಿವ್ಯಾ ಕಳೆದ ತಡರಾತ್ರಿವರಗೆ ಫ್ಯಾನ್ ಕೆಳಗೆ ನಿದ್ದೆ ಬರದೆ ಪರದಾಡಿದ್ದಾರೆ. ಅಲ್ಲದೇ ನಿನ್ನೆ ಮಧ್ಯಾಹ್ನ ಊಟವನ್ನು ಕೂಡಾ ನಿರಾಕರಿಸಿದ್ದರು. ಆದರೆ ರಾತ್ರಿ ಸ್ವಲ್ಪ ಊಟ ಮಾಡಿದ್ದಾರೆ.

PSI ನೇಮಕಾತಿ ಅಕ್ರಮ ಪ್ರಕರಣದ ಕಿಂಗ್ ಪಿನ್ ದಿವ್ಯಾ ಹಾಗೂ ಅವರ ತಂಡ ಈಗ CID ಪೋಲಿಸ್ ಕಸ್ಟಡಿಯಲ್ಲಿ ಇದ್ದಾರೆ.

ಕೋಟಿ, ಕೋಟಿ ಹಣವಿದ್ದರೂ ಅಕ್ರಮದ ಜಾಲಕ್ಕೆ ಸಿಲುಕಿರುವ ದಿವ್ಯಾ ಹಾಗರಗಿ ಇದೀಗ ತಮ್ಮನ್ನು ಭೇಟಿಯಾದವರ ಮುಂದೆ ಪಶ್ಚಾತ್ತಾಪದ ಮಾತುಗಳನ್ನಾಡುತ್ತಿದ್ದಾರೆ.

ಪೋಲಿಸರಿಗೆ ಯಾವುದೇ ಮಾಹಿತಿ ಹಾಗೂ ಸಾಕ್ಷ್ಯ ಸಿಗದಂತೆ ಮಾಡಲು ಆಕೆ ತಾನು ಬಳಕೆ ಮಾಡುತ್ತಿದ್ದ ಮೊಬೈಲ್ ಅನ್ನು ಒಡೆದು ಹಾಕಿದ್ದಾಳೆ. ಪೋಲಿಸರ ಮುಂದೇ ಈ ಘಟನೆ ನಡೆದಿದೆ. ಉಳಿದ 6 ಮಂದಿ ಆರೋಪಿಗಳ ಮೊಬೈಲ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಲಬುರಗಿ ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ದಿವ್ಯಾ ಹಾಗರಗಿ ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಇವೆಲ್ಲವೂ ಪಿತ್ರಾರ್ಜಿತವಾಗಿ ಬಂದಿರುವ ಆಸ್ತಿಯಾಗಿದೆಯಂತೆ.

ಪಿಎಸ್‍ಐ ನೇಮಕಾತಿ ಪರೀಕ್ಷೆಯ ಅಕ್ರಮಕ್ಕೆ ಸಾಥ್ ನೀಡಿರುವ ಆರೋಪದಡಿ ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿಯನ್ನು ಶುಕ್ರವಾರ ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಸದ್ಯ 11 ದಿನಗಳ ಕಾಲ ದಿವ್ಯಾ ಹಾಗರಗಿಯನ್ನು ನ್ಯಾಯಾಲಯ ಸಿಐಡಿ ಕಸ್ಟಡಿಗೆ ನೀಡಿದೆ.

ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ದಿವ್ಯಾ ಹಾಗರಗಿ ಕಳೆದ 18 ದಿನಗಳಿಂದ ತಲೆ ಮರೆಸಿಕೊಂಡಿದ್ದರು. ಆದರೆ ಸಿಐಡಿ ಅಧಿಕಾರಿಗಳು ಶುಕ್ರವಾರ ಮಹಾರಾಷ್ಟ್ರದ ಪುಣೆಯ ಹೋಟೆಲ್‍ವೊಂದರ ಬಳಿ ದಿವ್ಯಾ ಹಾಗರಗಿಯನ್ನು ಬಂಧಿಸಿದ್ದಾರೆ. ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ದಿವ್ಯಾ ಹಾಗರಗಿ ಕಳೆದ ರಾತ್ರಿ ಮಹಿಳಾ ನಿಲಯದಲ್ಲಿಯೇ ಕಾಲ ಕಳೆದಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!