ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬೆಂಗಳೂರಿನ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದ 9 ಅಭ್ಯರ್ಥಿಗಳನ್ನು ಹೈಗ್ರೌಂಡ್ ಪೋಲಿಸರು ಬಂಧಿಸಿದ್ದಾರೆ.
ಬೆಂಗಳೂರಿನ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದ 22 ಅಭ್ಯರ್ಥಿಗಳ ಓಎಂಆರ್ ಶೀಟ್‌ನಲ್ಲಿ ವ್ಯತ್ಯಾಸ ಕಂಡು ಬಂದಿತ್ತು.
ಅಂತಹ ಅಭ್ಯರ್ಥಿಗಳ ವಿರುದ್ಧ ಸಿಐಡಿ ಅಧಿಕಾರಿಗಳು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ದೂರಿನ ಆಧಾರದ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡ ಹೈಗ್ರೌಂಡ್ಸ್ ಪೊಲೀಸರು ಸದ್ಯ 9 ಅಭ್ಯರ್ಥಿಗಳನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಹೈಗ್ರೌಂಡ್ಸ್ ಪೊಲೀಸರಿಂದ ಬಂಧನಕ್ಕೊಳಗಾದ ಅಭ್ಯರ್ಥಿಗಳನ್ನು ಸದ್ಯದಲ್ಲೇ ಸಿಐಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಗಳಿವೆ.
ಸಿಐಡಿ ವಿಚಾರಣೆ ಬಳಿಕವೇ ಈ ಅಭ್ಯರ್ಥಿಗಳು ಯಾವ ರೀತಿಯಲ್ಲಿ ಲಾಬಿ ಮಾಡಿದ್ದಾರೆ? ಇವರಿಗೆ ಸಹಕಾರ ನೀಡಿದವರು ಯಾರು? ಎಂಬ ಬಗ್ಗೆ ಮಾಹಿತಿ ಬೆಳಕಿಗೆ ಬರಲಿದೆ.
2ನೇ ಎಫ್‌ಐಆರ್: ಪಿಎಸ್‌ಐ ಅಕ್ರಮದ ಕುರಿತು ಕಲಬುರಗಿಯ ಚೌಕ್ ಠಾಣೆಯಲ್ಲಿ ಮೊದಲ ಎಫ್‌ಐಆರ್ ದಾಖಲಾಗಿತ್ತು. ಹೈಗ್ರೌಂಡ್ಸ್ ಠಾಣೆಯಲ್ಲಿ ಎರಡನೇ ಎಫ್‌ಐಆರ್ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು