ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪದವಿಪೂರ್ವ ಉಪನ್ಯಾಸಕರಿಗೆ ಅಕ್ಟೋಬರ್ 21, 2020 ರಿಂದ 1, 2020ರ ವರೆಗೆ ರಜೆ ಘೋಷಣೆ ಮಾಡಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಸುರೇಶ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ‘ಅಕ್ಟೋಬರ್ 21, 2020 ರಿಂದ 1, 2020ರ ವರೆಗೆ ಪದವಿಪೂರ್ವ ಉಪನ್ಯಾಸಕರಿಗೆ ರಜೆ ಘೋಷಣೆ ಮಾಡಲು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಪೋಸ್ಟ್ ಮಾಡಿದ್ದಾರೆ.
ರಾಜ್ಯ ಸರ್ಕಾರವು ಶಾಲೆಗಳಿಗೆ ಅಕ್ಟೋಬರ್ 30ರ ವರೆಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಅವರು ಪದವಿಪೂರ್ವ ಉಪನ್ಯಾಸಕರಿಗೂ ರಜೆ ಘೋಷಿಸುವಂತೆ ಸರ್ಕಾರಕ್ಕೆ ಮನವಿ ಪತ್ರ ಬರೆದಿದ್ದರು. ಪರಿಸ್ಥಿತಿಯನ್ನು ಪರಿಶೀಲಿಸಿರುವ ಸಚಿವರು ಉಪನ್ಯಾಸಕರಿಗೂ ರಜೆ ಘೋಷಣೆ ಮಾಡಿದ್ದಾರೆ.
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ