ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮದ ಮಹಿಳೆಯರ ವಿಭಾಗದಲ್ಲಿ ಟಾಪರ್ ಆಗಿದ್ದ ಅಭ್ಯರ್ಥಿ ರಚನಾ ಹನುಮಂತ ಸೇರಿದಂತೆ 22 ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಎಫ್‌ಐಆರ್‌ನಲ್ಲಿ ಎ 17ನೇ ಆರೋಪಿ ರಚನಾ, ಮಹಿಳೆ ಎಸ್‌ಐ ಮೆರಿಟ್ ಪಟ್ಟಿಯಲ್ಲಿ ಮೊದಲನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.
ಸಿಐಡಿ ತನಿಖೆ ವೇಳೆ ಓಎಂಆರ್ ಶೀಟ್ ಮತ್ತು ಕಾರ್ಬನ್ ಶೀಟ್‌ನಲ್ಲಿ ವ್ಯತ್ಯಾಸ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಸಿಐಡಿ ಡಿವೈಎಸ್‌ಪಿ ನರಸಿಂಹಮೂರ್ತಿ ನೀಡಿದ ದೂರಿನ ಆಧಾರದ ಮೇಲೆ ಈವರೆಗೆ 22 ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.
172 ಅಭ್ಯರ್ಥಿಗಳನ್ನು ಸಿಐಡಿ ವಿಚಾರಣೆಗೆ ಕರೆಯಲಾಗಿತ್ತು. 4 ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಎಲ್ಲರೂ ವಿಚಾರಣೆಗೆ ಹಾಜರಾಗಿದ್ದರು.
ಅಭ್ಯರ್ಥಿಗಳ ನಕಲಿ ಓಎಂಆರ್ ಶೀಟ್‌ಗಳನ್ನು ಪಂಚನಾಮೆ ಮಾಡಿ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಆ ಬಳಿಕ ವೈಜ್ಞಾನಿಕವಾಗಿ ಪರಿಶೀಲಿಸಲು ಅಸಲು ಮತ್ತು ನಕಲಿ ಓಎಂಆರ್ ಪ್ರತಿಗಳನ್ನು ಎಫ್‌ಎಸ್‌ಎಲ್‌ಗೆ ಕಳಿಸಲಾಗಿತ್ತು.
ಏಪ್ರಿಲ್ 28 ರಂದು ಎಫ್‌ಎಸ್‌ಎಲ್‌ನಿಂದ ವರದಿ ಬಂದಿದ್ದು, 22 ಅಭ್ಯರ್ಥಿಗಳ ಓಎಂಆರ್ ಶೀಟ್‌ನಲ್ಲಿ ವ್ಯತ್ಯಾಸವಿದೆ ಎಂದು ತಿಳಿಸಿದೆ. ಅಕ್ರಮವೆಸಗಿರೊ 22 ಅಭ್ಯರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿತ್ತು. 22 ಅಭ್ಯರ್ಥಿಗಳು ಇತರ ವ್ಯಕ್ತಿಗಳೊಂದಿಗೆ ಸೇರಿ ಸಂಚು ರೂಪಿಸಿ ಅಕ್ರಮ ಎಸಗಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ 13 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು