December 23, 2024

Newsnap Kannada

The World at your finger tips!

rajnandini

Ex ಸ್ಪೀಕರ್ ಕಾಗೋಡು ತಿಮ್ಮಪ್ಪ ಪುತ್ರಿಗೆ ಕೊಲೆ ಬೆದರಿಕೆ : ಕಾರು ತಡೆದು ಹಲ್ಲೆಗೆ ಯತ್ನ

Spread the love

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿಗೆ ದುಷ್ಕರ್ಮಿಯೊಬ್ಬ ಕೊಲೆ ಬೆದರಿಕೆ ಹಾಕಿದ್ದಾನೆ, ಈ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ಜರುಗಿದೆ.

ಈ ನಡವೆ ಸಾಗರದ ರಸ್ತೆಯಲ್ಲಿ ಕಾರು ಅಡ್ಡಗಟ್ಟಿದ ಮಂಜುನಾಥ್ ಎಂಬಾತ ರಾಜನಂದಿನಿಯವರಿಗೆ ಕೊಲೆ ಬೆದರಿಕೆ ಹಾಕಿ, ಕಾರು ಚಾಲಕ ಪ್ರಕಾಶ್ ಮೇಲೆಯೂ ಹಲ್ಲೆಗೆ ಯತ್ನಿಸಿದ್ದಾನೆ.

ಸಾಗರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯೂ ಆಗಿರುವ ರಾಜನಂದಿನಿ, ವೈದ್ಯಕೀಯ ಶಿಬಿರದಲ್ಲಿ ಭಾಗವಹಿಸಿ ವಾಪಸ್ ಆಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Copyright © All rights reserved Newsnap | Newsever by AF themes.
error: Content is protected !!