PSI ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮಾಜಿ ಮುಖ್ಯಮಂತ್ರಿ ಮಗನ ಮೇಲೆ ದೂರು ದಾಖಲಾಗಿದೆ.
ಭ್ರಷ್ಟಾಚಾರದ ವಿರುದ್ಧ ಸಂಘಟನೆಯ ಪರವಾಗಿ ವಕೀಲರು ಸಿಐಡಿಗೆ ದೂರು ನೀಡಿದ್ದಾರೆ.
ಹೆಸರನ್ನು ಸೂಚಿಸದೇ, ಮಾಜಿ ಮುಖ್ಯಮಂತ್ರಿ ಮಗ ಎಂದು ಆರೋಪ ಮಾಡಲಾಗಿದೆ
ಪಿಎಸ್‌ಐ ಪರೀಕ್ಷೆ ಅಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಯ ಪುತ್ರನ ಕೈವಾಡವಿದೆ ಎಂದು ಅಭ್ಯರ್ಥಿಗಳು ಆರೋಪಿಸುತ್ತಿದ್ದಾರೆ. ಮಗ ಕೂಡ ಈ ಹಗರಣದಲ್ಲಿ ತೊಡಗಿರುವ ಬಗ್ಗೆ ರಾಜ್ಯಾದ್ಯಂತ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಆರೋಪಿಸಿ, ಅವರನ್ನು ವಿಚಾರಣೆ ಕರೆತರಬೇಕೆಂದು ಒತ್ತಾಯಿಸುತ್ತಿದ್ದೇವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಹಣಪಡೆದಿರುವ ದೊಡ್ಡ ವ್ಯಕ್ತಿಗಳು, ಐಪಿಎಸ್ ಅಧಿಕಾರಿಗಳನ್ನು ವಿಚಾರಣೆ ನಡೆಸಿಲ್ಲ. ರಾಜ್ಯದ ಪ್ರಭಾವಿ ಸಚಿವ ಅಶ್ವಥ್ ನಾರಾಯಣ, ಪೊಲೀಸ್ ಅಧಿಕಾರಿ ಅಮೃತಪಾಲ್ ಮತ್ತು ಇತರ ಅಧಿಕಾರಿಗಳನ್ನು ವಿಚಾರಣೆಗೆ ಕರೆಸಿಲ್ಲ. ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಮನವಿ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು