December 25, 2024

Newsnap Kannada

The World at your finger tips!

vine

ರಾಜ್ಯದಾದ್ಯಂತ ಮೇ 19ರವರೆಗೆ ಮದ್ಯ ಮಾರಾಟ ಇಲ್ಲ:ಪಾನಪ್ರಿಯರಿಗೆ ಬಿಗ್ ಶಾಕ್ !

Spread the love

ಮದ್ಯ ಪ್ರಿಯರಿಗೆ ಬಿಗ್​ ಶಾಕ್! ರಾಜ್ಯದಾದ್ಯಂತ ಮೇ 19ರವರೆಗೆ ಮದ್ಯ ಮಾರಾಟ ಇಲ್ಲ, ನಾಳೆಯಿಂದ ರಾಜ್ಯದಾದ್ಯಂತ ಮದ್ಯ ಮಾರಾಟಗಾರರ ಮುಷ್ಕರ ಆರಂಭವಾಗಲಿದೆ 15 ದಿನಗಳವರೆಗೆ ಈ ಮುಷ್ಕರ ನಡೆಸಲು ಮದ್ಯ ಮಾರಾಟಗಾರರು ನಿರ್ಧರಿಸಿದ್ದಾರೆ.

ಉಡುಪಿಯಲ್ಲಿ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಪ್ರತಿಭಟನೆ ಘೋಷಿಸಿದ್ದಾರೆ.

ಕೆಎಸ್​​ಪಿಸಿಎಲ್ ಎಂಡಿ ತುಘಲಕ್ ದರ್ಬಾರ್ ಗೆ ಬೇಸತ್ತು ಹಾಗೂ ಮುಖ್ಯಮಂತ್ರಿ, ಅಬಕಾರಿ ಸಚಿವರು ನಮ್ಮ ಸಂಪರ್ಕಕ್ಕೆ ಸಿಗುತ್ತಿಲ್ಲ. ನಮ್ಮ ಸಮಸ್ಯೆಯ ಬಗ್ಗೆ ಯಾರ ಬಳಿ ಹೇಳಿಕೊಳ್ಳುವುದು ಎಂದು ಪ್ರಶ್ನೆ ಮಾಡಿದ್ದಾರೆ

ನಾವು ಒಂದು ದಿನ ಮದ್ಯ ಖರೀದಿ ಮಾಡಿದ್ದರೆ ರಾಜ್ಯದಲ್ಲಿ 70 ಕೋಟಿ ರು ನಷ್ಟ. ಹಾಗಾಗಿ ವಿಭಾಗಮಟ್ಟದಲ್ಲಿ ಮದ್ಯ ಖರೀದಿ ನಿಲ್ಲಿಸಲು ನಿರ್ಧಾರ ಮಾಡಲಾಗಿದೆ.

ನಾಳೆ ಕಲಬುರಗಿ ವಿಭಾಗದಲ್ಲಿಯೂ ಮದ್ಯ ವ್ಯಾಪಾರಿಗಳಿಂದ ಮುಷ್ಕರ ಮಾಡಲಾಗುತ್ತಿದೆ. ಹೊಸಪೇಟೆ, ಬೆಳಗಾವಿ, ಮೈಸೂರು ಮಂಗಳೂರು ವಿಭಾಗದಲ್ಲಿ ಮದ್ಯ ಸಿಗಲ್ಲ. ಮೇ 19 ರ ವರೆಗೆ ನಿರಂತರ ರಾಜ್ಯಾದ್ಯಂತ ಹೋರಾಟ ನಡೆಯಲಿದೆ ಎಂದರು.

ಮುಷ್ಕರ​ ಎಲ್ಲೆಲ್ಲಿ ಮತ್ತು ಯಾವಾಗ ?

1) ಮೇ 6ರಂದು ಗುಲ್ಬರ್ಗ ವಿಭಾಗದ ಜಿಲ್ಲೆಗಳಾದ ಬೀದರ್, ಗುಲ್ಬರ್ಗ, ರಾಯಚೂರು, ಯಾದಗಿರಿ.

2) ಮೇ 10ರಂದು, ಹೊಸಪೇಟೆ ವಿಭಾಗದ ಜಿಲ್ಲೆಗಳಾದ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಗದಗ, ಕೊಪ್ಪಳ ಮತ್ತು ಬೆಳಗಾವಿ ವಿಭಾಗದ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ ,ಬಿಜಾಪುರ, ಧಾರವಾಡ, ಹಾವೇರಿ.

3) ಮೇ 12ರಂದು, ಮೈಸೂರು ವಿಭಾಗದ ಜಿಲ್ಲೆಗಳಾದ ಮೈಸೂರು ,ಚಿಕ್ಕಮಗಳೂರು, ಹಾಸನ ,ಮಂಡ್ಯ ,ಮತ್ತು ಮಂಗಳೂರು ವಿಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ ,ಉಡುಪಿ, ಉತ್ತರಕನ್ನಡ.

4) ಮೇ 17ರಂದು- ಬೆಂಗಳೂರು ವಿಭಾಗದ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ,ತುಮಕೂರು.

5) ಮೇ 19ರಂದು ಬೆಂಗಳೂರು ನಗರ ವಿಭಾಗದ ಕೆ ಎಸ್ ಬಿ ಸಿ ಎಲ್ ಡಿಪೋಗಳಲ್ಲಿ ಮಧ್ಯ ಖರೀದಿ ಮಾಡುವುದಿಲ್ಲ

Copyright © All rights reserved Newsnap | Newsever by AF themes.
error: Content is protected !!