ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ಆಕೆಯ ಸಹೋದರಿ ರಂಗೋಲಿ ಚಾಂಡೆಲ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಬಾಂದ್ರಾದ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ನೀಡಿದೆ.
ಕಂಗನಾ ಮತ್ತು ರಂಗೋಲಿ ಟ್ವೀಟ್ ಮಾಡುವ ಮೂಲಕ ಹಿಂದೂ ಮತ್ತು ಮುಸ್ಲಿಂರ ನಡುವೆ ಕೋಮುಗಲಭೆ, ದ್ವೇಷ ಹರಡಿದ್ದಾರೆ ಎಂದು ದೂರಿ ಅವರಿಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲು ನ್ಯಾಯಾಲಯ ಹೇಳಿದೆ.
ವಿನ್ಯಾಸಕ ಹಾಗೂ ಫಿಟ್ನೆಸ್ ತರಬೇತುದಾರ ಮುನ್ನಾವರಲಿ ಸಯ್ಯದ್ ನೀಡಿದ ದೂರಿಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ಜಯದೇವ್ ಘುಲೆ ಈ ಆದೇಶವನ್ನು ನೀಡಿದ್ದಾರೆ.
ಐಪಿಸಿ ಸೆಕ್ಷನ್ 153 ಎ, 295 ಎ( ಧರ್ಮವನ್ನು ಅಪಮಾನಿಸುವ ಮೂಲಕ ಕೋಮು ಭಾವನೆ ಕೆರಳಿಸುವ ಚಟುವಟಿಕೆ) ಮತ್ತು 124ಎ ಅನ್ವಯ ದೇಶದ್ರೋಹದ ಆಧಾರದ ಮೇಲೆ ಪ್ರಕರಣ ದಾಖಲಿಸಬೇಕೆಂದು ಸಯ್ಯದ್ ದೂರಿನಲ್ಲಿ ಕೇಳಿಕೊಂಡಿದ್ದರು.
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್