March 13, 2026

Newsnap Kannada

The World at your finger tips!

pattabhisheka

ಮಾಜಿ ಸಚಿವ ಪುಟ್ಟಸ್ವಾಮಿ ಈಗ ಪೂರ್ಣಾನಂದ ಪುರಿ ಸ್ವಾಮೀಜಿ – ಮೇ 15 ಕ್ಕೆ ಪಟ್ಟಾಭಿಷೇಕ

Spread the love

5 ದಶಕದ ಸುದೀರ್ಘ ರಾಜಕೀಯ ಜೀವನದಿಂದ ವಿಮುಕರಾದ ಮಾಜಿ ಸಚಿವ ಬಿ.ಜೆ.ಪುಟ್ಟಸ್ವಾಮಿ ಈಗ ಸನ್ಯಾಸ ದೀಕ್ಷೆ ಸ್ವೀಕರಿಸಿ ಪೂರ್ಣಾನಂದ ಪುರಿ ಸ್ವಾಮೀಜಿಗಳಾಗಿದ್ದಾರೆ

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಕೈಲಾಸ ಆಶ್ರಮ ಮಹಾಸಂಸ್ಥಾನದ ಪೀಠಾಧಿಪತಿ ಜಯೇಂದ್ರಪುರಿ ಸ್ವಾಮೀಜಿ ಅವರು ಪುಟ್ಟಸ್ವಾಮಿಗೆ ಸನ್ಯಾಸ ದೀಕ್ಷೆ ನೀಡಿ ಪೂರ್ಣಾನಂದ ಪುರಿ ಸ್ವಾಮಿಗಳೆಂದು ನಾಮಕರಣ ಮಾಡಿದರು.

ನೆಲಮಂಗಲದ ಬಳಿಯ ಮಾದನಾಯಕನಹಳ್ಳಿಯಲ್ಲಿನ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠಕ್ಕೆ ಪ್ರಥಮ ಪೀಠಾಧಿಪತಿಯಾಗಲಿದ್ದಾರೆ.

ಮೇ 15ರಂದು ಕೈಲಾಸ ಮಠದ ಜಯೇಂದ್ರಪುರಿ ಸ್ವಾಮೀಜಿಗಳು ಪಟ್ಟಾಭಿಷೇಕ ಮಹೋತ್ಸವ ನೆರವೇರಿಸಿಕೊಡಲಿದ್ದಾರೆ.

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಅಪ್ತ ಬಳಗದಲ್ಲಿದ್ದ ಪುಟ್ಟಸ್ವಾಮಿ ಬಿಎಸ್​ವೈ ರಾಜಕೀಯ ಕಾರ್ಯದರ್ಶಿಯೂ ಆಗಿದ್ದರು. ಅಲ್ಲದೇ ಸಹಕಾರ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಬಿಜೆಪಿ ಸರ್ಕಾರದ ಈ ಅವಧಿಯಲ್ಲಿ ರಾಜ್ಯ ಯೋಜನಾ ಮಂಡಳಿಯ ಉಪಾಧ್ಯಕ್ಷರಾಗಿದ್ದರು.

error: Content is protected !!