December 25, 2024

Newsnap Kannada

The World at your finger tips!

bommai amit shah

2-3 ದಿನದಲ್ಲಿ ಸಂಪುಟ ವಿಸ್ತರಣೆ ಸಾಧ್ಯತೆ : ಸಿಎಂ ಬೊಮ್ಮಾಯಿ

Spread the love

ನವದೆಹಲಿಯಲ್ಲಿ ನಮ್ಮ ನಾಯಕರ ಜೊತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಿದೆ , ಮುಂದಿನ ಎರಡು ಮೂರು ದಿನಗಳಲ್ಲಿ ಹೈಕಮಾಂಡ್‌ ಈ ಕುರಿತಂತೆ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಗೃಹ ಸಚಿವ ಅಮಿತ್‌ ಶಾ ಭೇಟಿಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆಯೂ ಚರ್ಚೆಯಾಗಿದೆ. ಸಂಪುಟ ವಿಸ್ತರಣೆ  ಬಗ್ಗೆಯೂ ಚರ್ಚೆ ಮಾಡಿದ್ದೇವೆ , ಜೆಪಿ ನಡ್ಡಾ ಅವರ ಜೊತೆಗೂ ಮಾತನಾಡುತ್ತೇನೆ ಎಂದು ಅಮಿತ್‌ ಶಾ ತಿಳಿಸಿದ್ದಾರೆ ಎಂದು ಹೇಳಿದರು.

ಇದನ್ನು ಓದಿ : PSI ನೇಮಕಾತಿ ಅಕ್ರಮ: ನಾಗಮಂಗಲ ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶರತ್ ಬಂಧನ

ಸಂಪುಟ ಸೇರ್ಪಡೆ ಕುರಿತಂತೆ ನಾನು ಯಾವುದೇ ಹೆಸರುಗಳ ಪಟ್ಟಿಯನ್ನು ಅಮಿತ್ ಶಾ ಅವರಿಗೆ ನೀಡಿಲ್ಲ ಮುಂದಿನ ವಾರ ಬಹಳ ಮುಖ್ಯವಾಗಿದೆ. ಯಾಕೆಂದರೆ ಸ್ಥಳೀಯ ಚುನಾವಣೆಯ ಬಗ್ಗೆ ಚರ್ಚೆ ನಡೆಯುತ್ತಿದೆ. ನಮ್ಮ ರಾಜ್ಯದ ರಾಜಕೀಯ ಸ್ಥಿತಿಗತಿ ಆಧಾರ ಬಗ್ಗೆ ಬದಲಾವಣೆ ಆಗಬಹುದು. ಬರುವ ಮೂರು ನಾಲ್ಕು ದಿನಗಳಲ್ಲಿ ನಿರ್ಧಾರವಾಗಲಿದೆ ಎಂದು ಮಾಹಿತಿ ನೀಡಿದರು.

Copyright © All rights reserved Newsnap | Newsever by AF themes.
error: Content is protected !!