ರಾಜ್ಯದಲಿ ಇನ್ನು ಮುಂದೆ ಬಲವಂತದ ಮತಾಂತರವು ಅಪರಾಧವಾಗಲಿದೆ . ಇದಕ್ಕಾಗಿ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಮೂಲಕ ಕಾಯ್ದೆಯನ್ನು ಜಾರಿಗೆ ತರಲು ನಿರ್ಧರಿಸಿದೆ. ಬಲವಂತದ, ಆಮಿಷದ, ಒತ್ತಡದ ಮತಾಂತರಕ್ಕೆ ರಾಜ್ಯ ಸರ್ಕಾರ ಕೊನೆಗೂ ಕಾನೂನು ಅಸ್ತ್ರ ಪ್ರಯೋಗ ಮಾಡಿದೆ.ರಾಜ್ಯದಲ್ಲಿ ಇನ್ನು ಮುಂದೆ ಬಲವಂತದ ಮತಾಂತರ ಅಪರಾಧವಾಗಲಿದೆ.
ವಿಧಾನ ಪರಿಷತ್ ನಲ್ಲಿ ಬಹುಮತ ಇಲ್ಲದ ಕಾರಣ ಮಸೂದೆ ಮಂಡನೆ ಮಾಡಿರಲಿಲ್ಲ. ಈಗ ಕಾಯ್ದೆ ಜಾರಿಗೆ ಸುಗ್ರಿವಾಜ್ಞೆ ಹೊರಡಿಸಲು ಸರ್ಕಾರ ಮುಂದಾಗಿದೆ. ಈ ಸುಗ್ರಿವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ ಕೂಡಲೇ ಕಾಯ್ದೆ ಜಾರಿ ಆಗಲಿದೆ.
ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ 2021 ಅನ್ನು ಸುಗ್ರಿವಾಜ್ಞೆ ಮೂಲಕ ಜಾರಿ ಮಾಡಲು ಇಂದಿನ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಕಳೆದ ಬೆಳಗಾವಿ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರವಾಗಿತ್ತು.
ಇದನ್ನು ಓದಿ :SSLC ಪೇಲ್ ಕಡಿಮೆ ಮಾಡಲು ಶೇ 10 ರಷ್ಟು ಗ್ರೇಸ್ ಮಾರ್ಕ್ಸ್ : ಸರ್ಕಾರದ ನಿರ್ಧಾರ
ಕಾಯ್ದೆ ಎಷ್ಟು ಕಠಿಣ
- ಬಲವಂತದ ಮತಾಂತರ ಜಾಮೀನುರಹಿತ ಅಪರಾಧ ಮತ್ತು ಅಸಿಂಧು
- ಉಡುಗೊರೆ, ಕೆಲಸ, ಉಚಿತ ಶಿಕ್ಷಣ, ವಿವಾಹದ ಆಮಿಷ ಒಡ್ಡಿ ಮತಾಂತರ ಮಾಡುವಂತಿಲ್ಲ.
- ಅಮಿಷ ಒಡ್ಡಿ ಮತಾಂತರಗೊಂಡು ವಿವಾಹ ಆಗಿದ್ದರೆ ಆ ಮದುವೆ ಅಸಿಂಧು
- ಮತಾಂತರದಲ್ಲಿ ಶಿಕ್ಷಣ ಸಂಸ್ಥೆ, ಆಶ್ರಮ, ಧಾರ್ಮಿಕ ಮಿಷನರಿ, ಎನ್‍ಜಿಓಗಳು ಪಾಲ್ಗೊಳ್ಳುವಂತಿಲ್ಲ.
- ಸಾಮೂಹಿಕ ಮತಾಂತರದಲ್ಲಿ ಭಾಗಿಯಾದ ಸಂಸ್ಥೆಗಳಿಗೆ ಸರ್ಕಾರದ ಅನುದಾನ ಸ್ಥಗಿತ
- ಧರ್ಮ ಬದಲಿಸುವ 60 ದಿನ ಮೊದಲು ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಬೇಕು.
- ಮತಾಂತರಗೊಂಡ ಎಸ್‍ಸಿ, ಎಸ್‍ಟಿ ವ್ಯಕ್ತಿಗಳಿಗೆ ಸಿಗುವ ಮೀಸಲಾತಿ,ಇತರೆ ಸೌಲಭ್ಯ ರದ್ದು
ದಂಡ ಮತ್ತು ಶಿಕ್ಷೆಎಷ್ಟು ?
- ಎಸ್‍ಸಿ,ಎಸ್‍ಟಿ ಸಮುದಾಯದವರನ್ನು ಬಲವಂತವಾಗಿ ಮತಾಂತರ ಮಾಡುವಂತಿಲ್ಲ
- ಅಪ್ರಾಪ್ತರು, ಮಹಿಳೆಯರು, ಬುದ್ದಿಮಾಂಧ್ಯರಿಗೆ ಆಸೆ, ಆಮಿಷ ಒಡ್ಡಿ ಮತಾಂತರ ಮಾಡಬಾರದು.
- ಕಾಯ್ದೆ ಉಲ್ಲಂಘಿಸಿದಲ್ಲಿ ಕನಿಷ್ಠ 3ರಿಂದ 10 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ.
- ಇತರರನ್ನು ಬಲವಂತವಾಗಿ ಮತಾಂತರಿಸಿದ್ದಲ್ಲಿ 3 ರಿಂದ 5 ವರ್ಷ ಜೈಲು ಶಿಕ್ಷೆ, 25 ಸಾವಿರ ರೂ. ದಂಡ.
- ಸಾಮೂಹಿಕ ಮತಾಂತರ ಮಾಡಿದವರಿಗೆ 3ರಿಂದ 10 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ.
- ಬಲವಂತದ ಮತಾಂತರ ಸಾಬೀತಾದಲ್ಲಿ ಮತಾಂತರಕ್ಕೆ ಒಳಗಾದವನಿಗೆ ಗರಿಷ್ಠ 5 ಲಕ್ಷ ಪರಿಹಾರ
- ಪರಿಹಾರದ ಮೊತ್ತವನ್ನು ಮತಾಂತರ ಮಾಡಿದವನಿಂದಲೇ ವಸೂಲಿ
- ಈ ಹಿಂದೆಯೂ ಮತಾಂತರ ಮಾಡಿದ್ದು ಸಾಬೀತಾದಲ್ಲಿ ದುಪ್ಪಟ್ಟು ದಂಡ ವಿಧಿಸಲಾಗುವುದು.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು