ರಾಜ್ಯದ ಜಿ.ಪಂ ಹಾಗೂ ತಾ.ಪಂ. ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದ ಅರ್ಜಿಯನ್ನು ಮೇ 17ರಂದು ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ಪ್ರಕಟಿಸಿದೆ.
ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ ಮೆಮೋ ಪರಿಗಣಿಸಿದ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್‌ಪ್ರಸಾದ್ ಹಾಗೂ ನ್ಯಾ. ಎಂ.ಜಿ.ಎಸ್ ಕಮಾಲ್ ಅವರಿದ್ದ ರಜಾಕಾಲದ ವಿಭಾಗೀಯ ನ್ಯಾಯಪೀಠ ಈ ನಿರ್ಧಾರವನ್ನು ಪ್ರಕಟಿಸಿದರು.
ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ನ್ಯಾಯವಾದಿ ಕೆ.ಎನ್. ಫಣೀಂದ್ರ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಅದರಂತೆ, ರಾಜ್ಯದಲ್ಲೂ ಜಿ.ಪಂ. ತಾ.ಪಂ ಚುನಾವಣೆ ನಡೆಸಬೇಕಾಗಿದೆ. ಈಗಾಗಲೇ ಚುನಾವಣೆ ಸಾಕಷ್ಟು ವಿಳಂಬವಾಗಿದೆ. ಈ ಕುರಿತ ಚುನಾವಣಾ ಆಯೋಗದ ಅರ್ಜಿ ವಿಚಾರಣಾ ಹಂತದಲ್ಲಿದೆ. ಸುಪ್ರೀಂಕೋರ್ಟ್ ತೀರ್ಪಿನಿಂದ ತುರ್ತು ಸ್ಥಿತಿ ಎದುರಾಗಿದ್ದು, ಅದಕ್ಕಾಗಿ ಮೆಮೋ ಸಲ್ಲಿಸಲಾಗಿದೆ ಎಂದರು
ಮೇ 17ರಂದು ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿಬೇಕು ಎಂದು ಮಾಡಿದ ಮನವಿಯಂತೆ ನ್ಯಾಯಪೀಠ, ಅರ್ಜಿಯನ್ನು ಮೇ 17ರಂದು ವಿಚಾರಣೆ ನಡೆಸುವುದಾಗಿ ಹೇಳಿ, ವಿಚಾರಣೆಯನ್ನು ಮುಂದೂಡಿತು.
ಇದನ್ನು ಓದಿ :PSI ನೇಮಕಾತಿ ವಿಭಾಗದ DYSP ಶಾಂತ ಕುಮಾರ್ ಬಂಧನ
ಯಾವ ಅರ್ಜಿ ವಿಚಾರಣೆ ಆಗಬೇಕು ?
ರಾಜ್ಯದಲ್ಲೂ ಚುನಾವಣೆ ಸನ್ನಿಹಿತ ಕಳೆದ ವರ್ಷ ಏಪ್ರಿಲ್, ಮೇ ಮತ್ತು ಜೂನ್ ತಿಂಗಳಲ್ಲಿ ಅವಧಿ ಪೂರ್ಣಗೊಂಡ ರಾಜ್ಯದ ಜಿ.ಪಂ ಹಾಗೂ ತಾ.ಪಂಗಳಿಗೆ ಚುನಾವಣೆ ನಡೆಸಲು ಸಿದ್ದತೆ ಆರಂಭಿಸಿದ್ದ ಚುನಾವಣಾ ಆಯೋಗ ಕ್ಷೇತ್ರ ಪುನರ್‌ವಿಂಗಡಣೆ ಮಾಡಿ ಮತದಾರರ ಅಂತಿಮ ಪಟ್ಟಿ ಸಹ ಪ್ರಕಟಿಸಿತ್ತು. ಮೀಸಲಾತಿ ಕರಡು ಸಹ ಪ್ರಕಟಿಸಲಾಗಿತ್ತು. ಇನ್ನೇನು ದಿನಾಂಕ ಘೋಷಣೆ ಮಾಡಬೇಕೆನ್ನುವಷ್ಟರಲ್ಲಿ ಕ್ಷೇತ್ರ ಪುರನ್‌ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದು ಸರ್ಕಾರ ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚಿಸಿತ್ತು. ಅದನ್ನು ಪ್ರಶ್ನಿಸಿ ಚುನಾವಣಾ ಆಯೋಗ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಆ ಅರ್ಜಿ ವಿಚಾರಣಾ ಹಂತದಲ್ಲಿದೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು