ಮಗಳ ಮದುವೆ ಮುಗಿಸಿ, ಆಕೆಯನ್ನು ಪತಿಯ ಮನೆಗೆ ಕಳುಹಿಸಿದ ಕೆಲವೇ ಹೊತ್ತಿನಲ್ಲಿ ತಂದೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ಪಟ್ಟಣದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಜರುಗಿದೆ. ಕಿಬ್ಬೆಟ್ಟ ಗ್ರಾಮದ ಕೃಷಿಕ ಚಿನ್ನಪ್ಪ (60) ಮೃತ ವ್ಯಕ್ತಿ.
ಕಲ್ಯಾಣ ಮಂಟಪದಲ್ಲಿ ತಮ್ಮ ದ್ವಿತೀಯ ಪುತ್ರಿಯ ವಿವಾಹ ಸಮಾರಂಭವನ್ನು ಮುಗಿಸಿ ವಧು-ವರರನ್ನು ಗೋಕಾಕ್‌ಗೆ ಕಳುಹಿಸಿದ ನಂತರ ಈ ಘಟನೆ ನಡೆದಿದೆ. ಹೃದಯಾಘಾತಕ್ಕೆ ಒಳಗಾದ ತಕ್ಷಣವೇ ಚಿನ್ನಪ್ಪನನ್ನು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಇದನ್ನು ಓದಿ :ಕಾಳಿ ಸ್ವಾಮಿ ಮುಖಕ್ಕೆ ಮಸಿ ಬಳಿದ ಗುಂಪು – ಬೆಂಗಳೂರಿನಲ್ಲಿ ಕೃತ್ಯ
ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ಕಿಬ್ಬೆಟ್ಟ ಗ್ರಾಮದಲ್ಲಿ ನಡೆಯಲಿದೆ. ಮದುವೆ ಸಂಭ್ರಮದಲ್ಲಿದ್ದ ಕುಟುಂಬಸ್ಥರಲ್ಲಿ ಈಗ ನೀರವ ಮೌನ ಆವರಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಕೊಡಗಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ನದಿಗೆ ಹಾರಿ ಆತ್ಮಹತ್ಯೆ
ಆಕಸ್ಮಿಕ ಗುಂಡು ಸಿಡಿದು ವ್ಯಕ್ತಿ ಸಾವು
ಕೊಡಗಿನಲ್ಲಿ ನಿರ್ಮಾಣಗೊಳ್ಳಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ