ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪಿಎಸ್‌ಐ ಆಗಿದ್ದ ಡಿ.ಆರ್.ರವಿಕುಮಾರ್ ಅವರನ್ನು ಒಂದು ವಾರದಲ್ಲಿ ಮೂರು ಬಾರಿ ವರ್ಗಾವಣೆ ಮಾಡಲಾಗಿದೆ. ಆದರೆ, ವರ್ಗಾವಣೆ ಮಾಡಿದ ಸ್ಥಳಗಳಿಗೆ ಪಿಎಸ್‌ಐ ಮಾತ್ರ ರಿಪೋರ್ಟ್ ಮಾಡಿಕೊಂಡಿಲ್ಲ.
ಚಾಮರಾಜನಗರ ಪೂರ್ವ ಠಾಣೆಯಲ್ಲಿದ್ದ ಪಿಎಸ್‌ಐ ಡಿ.ಆರ್.ರವಿಕುಮಾರ್ ಎಂಬವರನ್ನು ಕಳೆದ 6 ರಂದು ಬೇಗೂರು ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಬಳಿಕ, 7 ರಂದು ವರ್ಗಾವಣೆ ಆದೇಶ ಮಾರ್ಪಡಿಸಿ ಬೇಗೂರು ಠಾಣೆಯಿಂದ ಗುಂಡ್ಲುಪೇಟೆ ಠಾಣೆ ಅಪರಾಧ ವಿಭಾಗದ ಪಿಎಸ್‌ಐ ಆಗಿ ಟ್ರಾನ್ಸ್‌ಫರ್ ಮಾಡಲಾಗಿದೆ.
ಇದನ್ನು ಓದಿ :ಅಶಿಸ್ತು, ಉದ್ಧಟತನ ತೋರಿದ ರಮ್ಮಾ -ಆರ್.ಧ್ರುವನಾರಾಯಣ್
ಇದಾದ ನಂತರ, ಕಳೆದ 11 ರಂದು ಗುಂಡ್ಲುಪೇಟೆ ಠಾಣೆಯಿಂದ ಕೊಡಗು ಜಿಲ್ಲೆಯ ವಿರಾಜಪೇಟೆ ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಲಾದ ಸ್ಥಳಗಳಿಗೆ ಪಿಎಸ್‌ಐ ರಿಪೋರ್ಟ್ ಮಾಡಿಕೊಂಡಿರಲಿಲ್ಲ ಎಂದು ತಿಳಿದುಬಂದಿದೆ.
ಸದ್ಯ, ವಾರದಲ್ಲಿ 3 ಬಾರಿ ವರ್ಗಾವಣೆ ಭಾಗ್ಯ ಕಂಡಿದ್ದು ಸಾರ್ವಜನಿಕ ವಲಯದಲ್ಲಿ ಚರ್ಚೆ ಆಗುತ್ತಿದೆ. ಈ ವರ್ಗಾವಣೆಗೆ ನಿರ್ದಿಷ್ಟ ಕಾರಣ ಗೊತ್ತಾಗಿಲ್ಲ.
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
More Stories
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು