ನವಜಾತ ಶಿಶುವನ್ನು ಹೆತ್ತ ತಾಯಿಯೇ ರಸ್ತೆಗೆ ಎಸೆದು ಹೋಗಿದ್ದಾಳೆ. ರಸ್ತೆಯಲ್ಲಿ ಮಗುವಿನ ಅಳುವಿನ ಶಬ್ದ ಕೇಳಿ ರಕ್ಷಣೆ ಮಾಡಿರುವ ಘಟನೆ ಬನ್ನೇರುಘಟ್ಟ ರಸ್ತೆಯ ವಿವರ್ಸ್ ಕಾಲೋನಿಯಲ್ಲಿ ಇಂದು ಬೆಳಿಗ್ಗೆ ಜರುಗಿದೆ
ಈ ಬೆಳಿಗ್ಗೆ ವಿವರ್ಸ್ ಕಾಲೋನಿಯ 5ನೇ ಕ್ರಾಸ್ ರಸ್ತೆ ಬದಿಯಲ್ಲಿ ಮಗುವಿನ ಅಳುವಿನ ಶಬ್ದ ಕೇಳಿಸಿಕೊಂಡ ನಿವಾಸಿಗಳು ಹೊರ ಬಂದು ನೋಡಿದಾಗ ರಕ್ತಸಿಕ್ತ ಸ್ಥಿತಿಯಲ್ಲಿ ಆಗಷ್ಟೇ ಜನಿಸಿದ ಮಗು ಪತ್ತೆಯಾಗಿದೆ.
ಅಕ್ಕಪಕ್ಕದ ನಿವಾಸಿಗಳು ಮಗುವನ್ನು ರಕ್ಷಣೆ ಮಾಡಿದ್ದಾರೆ, ಏರಿಯಾದ ಚೂಡಾಮಣಿ ಎಂಬ ಮಹಿಳೆ ಮಗುವನ್ನು ಶುಚಿ ಮಾಡಿ ಸ್ನಾನ ಮಾಡಿಸಿದ್ದಾರೆ.
ಇದನ್ನು ಓದಿ :ಮೈಸೂರು ಶಾಸಕ ದೇವೇಗೌಡರ 3 ವರ್ಷದ ಮೊಮ್ಮಗಳು ಅನಾರೋಗ್ಯದಿಂದ ಸಾವು
ಪ್ರಪಂಚವೇ ಅರಿಯದ ಹಸುಗೂಸುನ್ನು ರಸ್ತೆಗೆಸೆದಿರುವ ಹೆತ್ತಮ್ಮ ಅಪ್ರಾಪ್ತೆ ಇಲ್ಲವೇ ಅನೈತಿಕ ಸಂಬಂಧಕ್ಕೆ ಜನಿಸಿರುವ ಸಂಶಯ ವ್ಯಕ್ತವಾಗಿದೆ ಪುಟ್ಟ ಕಂದನನ್ನು ರಸ್ತೆಯಲ್ಲಿ ಎಸೆದು ಹೋಗಿರುವ ನಿರ್ದಯಿ ತಾಯಿಯ ವಿರುದ್ಧ ಸ್ಥಳೀಯರು ಆಕ್ರೋಷ ವ್ಯಕ್ತಪಡಿಸಿದ್ದಾರೆ
ಕೋಣನಕುಂಟೆ ಪೊಲೀಸರು ಭೇಟಿ ನೀಡಿದ್ದಾರೆ. ಬಳಿಕ ಕಂದಮ್ಮನನ್ನು ರಕ್ಷಣೆ ಮಾಡಿದ ಮಹಿಳೆ ಚೂಡಾಮಣಿ ಮಗುವನ್ನು ಸಾಕಲು ನಮ್ಮ ಸುಪರ್ದಿಗೆ ನೀಡಿ ಎಂದು ಗೊಗರೆದ್ದಾರೆ. ಆದರೆ ಕೊಂಣನಕುಂಟೆ ಪೊಲೀಸರು ನವಜಾತ ಹೆಣ್ಣು ಮಗುವನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ