ರಾಜ್ಯದಲ್ಲಿ ಶಾಲೆಗಳು ಆರಂಭ ಜೊತೆಯಲ್ಲೇ ಕೊರೊನಾ 4ನೇ ಅಲೆಯ ಭೀತಿಯಲ್ಲಿರುವ ರಾಜ್ಯಕ್ಕೆ ಇದೀಗ ಮತ್ತೊಂದು ಆತಂಕ ಎಂದರೆ ಈ ವೇಳೆಯಲ್ಲೇ ಟೊಮೆಟೊ ಜ್ವರ ಕಾಣಿಸಿಕೊಂಡಿದೆ.
ಕೇರಳದಲ್ಲಿ ಈಚೆಗಷ್ಟೇ ಕಾಣಿಸಿಕೊಂಡ ಟೊಮೆಟೋ ಜ್ವರ ಉಡುಪಿ ಜಿಲ್ಲೆಯಲ್ಲಿ 4 ವರ್ಷದ ಮಗುವಿನಲ್ಲಿ ಕಾಣಿಸಿಕೊಂಡ ಶಂಕೆ ವ್ಯಕ್ತವಾಗಿದೆ. ರಾಜ್ಯದಲ್ಲಿ ಈ ಜ್ವರ ಕಾಣಿಸಿಕೊಂಡಿರುವ ಬಗ್ಗೆ ಆರೋಗ್ಯ ಇಲಾಖೆ ಯಾವುದೇ ಅಧಿಕೃತ ಪ್ರಕಟಣೆ ಬಿಡುಗಡೆಯಾಗಿಲ್ಲ.
ಸೋಂಕಿತ ಮಗುವನ್ನು ಐಸಿಯು (ನಿಗಾ ಘಟಕ) ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಂಕಿತ ಪ್ರಕರಣ ಪತ್ತೆಯ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಇದನ್ನು ಓದಿ :KMF ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ: ; ಅಧ್ಯಕ್ಷರು ಸೇರಿ ಮೂವರಿಗೆ ನೋಟೀಸ್
ಮಂಗಳೂರು, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿಯೂ ಆರೋಗ್ಯ ಇಲಾಖೆ ಅಧಿಕಾರಿಗಳು ಹದ್ದಿನ ಕಣ್ಣು ಇರಿಸಿದ್ದಾರೆ. ಜೊತೆಗೆ ಸಾಂಕ್ರಾಮಿಕ ರೋಗ ತಜ್ಞರು ಇದು ತಾನೇ ಕಡಿಮೆಯಾಗುವ ಸೋಂಕು, ಇದಕ್ಕೆ ನಿರ್ದಿಷ್ಟ ಔಷಧಿಯಿಲ್ಲ ಎಂದು ಹೇಳಿದ್ದಾರೆ.
ಟೊಮೆಟೊ ಫ್ಲೂ ಆರೋಗ್ಯಾಧಿಕಾರಿಗಳಿಗೆ ತಲೆನೋವು ತರಿಸಿದೆ. ಅದಕ್ಕಾಗಿ ಜ್ವರ ಬಂದವರನ್ನು ಹೇಗೆ ಗುರುತಿಸಬೇಕು? ಹೇಗೆ ಪರೀಕ್ಷೆ ಮಾಡಿಸಬೇಕು? ಎನ್ನುವ ಬಗ್ಗೆ ಇನ್ನೂ ಪ್ರಚಾರ ಕೈಗೊಳ್ಳಬೇಕಿದೆ. ಈ ಬಗ್ಗೆ ಇನ್ನೂ ಆರೋಗ್ಯಾಧಿಕಾರಿಗಳಲ್ಲಿಯೇ ಗೊಂದಲ ಇವೆ.
ಟೊಮೆಟೊ ಜ್ವರದ ಲಕ್ಷಣಗಳು ;
ವಿಪರೀತ ಜ್ವರ, ನಿರ್ಜಲೀಕರಣ, ಚರ್ಮದ ತುರಿಕೆ, ಕೈ ಮತ್ತು ಕಾಲುಗಳ ಚರ್ಮದ ಬಣ್ಣವೂ ಬದಲು, ಗುಳ್ಳೆಗಳು, ಕಿಬ್ಬೊಟ್ಟೆಯ ಸೆಳತ ವಾಕರಿಕೆ, ವಾಂತಿ – ಅತಿಸಾರ, ಸ್ರವಿಸುವ ಮೂಗು, ಕೆಮ್ಮು, ಸೀನು ಆಯಾಸ, ದೇಹದಲ್ಲಿ ನೋವು.
- ಬಾರ್ ಲೈಸೆನ್ಸ್ಗೆ 20 ಲಕ್ಷ ಲಂಚದ ಬೇಡಿಕೆ – ಅಬಕಾರಿ ಡಿಸಿ ವಿರುದ್ಧ ಲೋಕಾಯುಕ್ತಕ್ಕೆ ದೂರು
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
- RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
- ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಏಕನಾಥ್ ಶಿಂಧೆ ರಾಜೀನಾಮೆ: ದೇವರ ಮೊರೆ ಹೋದ ಬೆಂಬಲಿಗರು, ಮಹಾಯತಿ ಸರ್ಕಾರ ರಚನೆಗೆ ತಯಾರಿ
More Stories
ಬಾರ್ ಲೈಸೆನ್ಸ್ಗೆ 20 ಲಕ್ಷ ಲಂಚದ ಬೇಡಿಕೆ – ಅಬಕಾರಿ ಡಿಸಿ ವಿರುದ್ಧ ಲೋಕಾಯುಕ್ತಕ್ಕೆ ದೂರು
ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್