ಬಿಜೆಪಿ ಸೇರಲು ಮುಂದಾಗಿರುವ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ವಿಧಾನ ಪರಿಷತ್ ಅಧ್ಯಕ್ಷ ಹಾಗೂ M L C ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದರು, ಸುದ್ದಿಗೋಷ್ಠಿಯಲ್ಲಿ ತಮ್ಮ ರಾಜೀನಾಮೆಯನ್ನು ಪ್ರಕಟಿಸಿದ ನಂತರ ರಾಜೀನಾಮೆಪತ್ರವನ್ನು ಪರಿಷತ್ ಕಾರ್ಯದರ್ಶಿಯರಿಗೆ ಸಲ್ಲಿಸಿದರು.
ಈಗಾಗಲೇ ವಿಧಾನಪರಿಷತ್‍ನ ಎರಡು ಶಿಕ್ಷಕರು ಮತ್ತು ಎರಡು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ, ಮುಂಬರುವ ಚುನಾವಣೆಯಲ್ಲಿ ಹೊರಟ್ಟಿ ಅವರು ಬಿಜೆಪಿಯಿಂದ ಸ್ಪರ್ಧೆಗೆ ಇಳಿಯಲಿದ್ದಾರೆ.
ಬುಧವಾರ ಮಲ್ಲೇಶ್ವರಂದಲ್ಲಿರುವ ಜಗನ್ನಾಥ ಭವನದಲ್ಲಿ ಪಕ್ಷದ ಮುಖಂಡnರ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಹೊರಟ್ಟಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವವನ್ನು ಪಡೆದು ಕಮಲವನ್ನು ಮುಡಿಗೇರಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನು ಓದಿ : ಜ್ಞಾನ ವ್ಯಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ – CRPF ನಿಂದ ರಕ್ಷಣೆಗೆ ಕೋರ್ಟ್ ಆದೇಶ
ಈವರೆಗೂ ಪಶ್ಚಿಮ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಸುತ್ತಿದ್ದ ಹೊರಟ್ಟಿ ಅವರು ಸತತ 7 ಬಾರಿ ಗೆದ್ದು ದಾಖಲೆಯನ್ನೇ ನಿರ್ಮಿಸಿದ್ದಾರೆ. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಜೆಡಿಎಸ್‍ಗೆ ಗುಡ್‍ಬೈ ಹೇಳಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು