ಬೆಂಗಳೂರು ಬ್ರ್ಯಾಂಡ್ ಉಳಿಸಿಕೊಳ್ಳಿ ಸಿಎಂಗೆ SMK ಪತ್ರ

Team Newsnap
2 Min Read

ಇದನ್ನು ಓದಿ :ಜ್ಞಾನವಾಪಿ ಮಸೀದಿ ವಿವಾದ – ವಾರಣಾಸಿ ಕೋರ್ಟ್‌ ವಿಚಾರಣೆಗೆ ಸುಪ್ರೀಂ ತಡೆ

ಬೆಂಗಳೂರಿನ ಹಲವೆಡೆ ಮಳೆ ಅವಾಂತರದಿಂದ ಬೆಂಗಳೂರಿನ ಖ್ಯಾತಿಗೆ ಧಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಮುಖ್ಯಮಂತ್ರಿಗಳು, ಬಿಜೆಪಿ ಹಿರಿಯ ನಾಯಕ ಎಸ್.ಎಂ. ಕೃಷ್ಣ ಅವರು ಬೆಂಗಳೂರಿಗೆ ಇರುವ ಬ್ರ್ಯಾಂಡ್ ಅನ್ನು ಉಳಿಸಿಕೊಳ್ಳಿ ಎಂದು ಪತ್ರ ಬರೆದು ಕೆಲವು ಸಲಹೆಗಳನ್ನು ನೀಡಿದ್ದಾರೆ.

ಭವಿಷ್ಯದ ಬೆಂಗಳೂರು ಹಾಗೂ ರಾಜ್ಯದ ಅಭಿವೃದ್ಧಿ ಗಮನದಲ್ಲಿ ಇಟ್ಟಕೊಂಡು ದೂರಗಾಮಿ ದೃಷ್ಟಿಯಿಂದ ಶಾಶ್ವತ ಕಾರ್ಯ ಕ್ರಮಗಳನ್ನು ರೂಪಿಸಿ “ಬ್ರಾಂಡ್ ಬೆಂಗಳೂರು” ಹೆಸರನ್ನು ಉಳಿಸಿಕೊಳ್ಳಲು ದಿಟ್ಟ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯವಾಗಿದೆ.

ಎಸ್ ಎಂ ಕೃಷ್ಣ ಸಲಹೆಗಳೇನು ? :

  1. ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ಅಭಿವೃದ್ಧಿಗೆ ರಚಿಸಿದ್ದ ಬೆಂಗಳೂರು ಅಜೆಂಡಾ ಟಾಸ್ಕ್ ಫೋರ್ಸ್ ಸಮಿತಿಯನ್ನು ಪುನರ್ ರಚಿಸಿ ವಿವಿಧ ವಿಭಾಗಗಳ ತಜ್ಞರನ್ನು ಸೇರಿಸಿ ಅವರ ಸಲಹೆಗಳನ್ನು ಪಡೆದು ದೂರಗಾಮಿ ನೆಲೆಯಲ್ಲಿ ಬೆಂಗಳೂರಿನ ಅಭಿವೃದ್ಧಿ ಗೆ ನೀಲಿನಕ್ಷೆ ತಯಾರಿಸುವುದು.
  2. ಬೆಂಗಳೂರು ವ್ಯಾಪ್ತಿಯಲ್ಲಿ ಒಳಚರಂಡಿ ವ್ಯವಸ್ಥೆ ಸುಧಾರಿಸಿ ಹೊಸದಾಗಿ ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಗೊಂಡಿರುವ ಬಡಾವಣೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ತಜ್ಞ ಅಧಿಕಾರಿಗಳ ತಂಡ ರಚಿಸುವುದು ಹಾಗೂ ರಾಜಕಾಲುವೆಗಳ ನಿರ್ವಾಹಣೆಗೆ ಆದ್ಯತೆ ಮೇಲೆ ಕ್ರಮ ವಹಿಸಿ ಮುಂಗಾರ ಮಳೆಯ ಆಗಮನಕ್ಕೂ ಮುನ್ನ ಸಮರೋಪದಿಯ ಕಾರ್ಯ ಕೈಗೊಳ್ಳುವುದು.
  3. ಬೆಂಗಳೂರಿಗೆ ಪರ್ಯಾಯವಾಗಿ ಮೈಸೂರು, ತುಮಕೂರು ಮತ್ತು ಹುಬ್ಬಳ್ಳಿಯಂತಹ ನಗರಗಳನ್ನು ಗುರುತಿಸಿ ನೂತನ ಕೈಗಾರಿಕಾ ವಸಹಾತುಗಳ‌ ಸ್ಥಾಪನೆಗೆ ಅವಕಾಶ ಕಲ್ಪಿಸಿ ಬೆಂಗಳೂರಿ ನಗರದ ಮೇಲಿನ ಒತ್ತಡ ಕಡಿಮೆ ಮಾಡುವುದು. ನನ್ನ ಅಧಿಕಾರಾವಧಿಯಲ್ಲಿ ನಿರ್ಮಾಣಗೊಂಡಿದ್ದ ಮೈಸೂರು ಬೆಂಗಳೂರು ಹೆದ್ದಾರಿ ಇಂದು ಹತ್ತು ಪಥಗಳ ರಾಷ್ಟ್ರೀಯ ಹೆದ್ದಾರಿಯಾಗಿ‌ ಮೇಲ್ದರ್ಜೆಗೆ ಏರಿದ್ದು ಇದು ಮೈಸೂರು ನಗರ ಬೆಂಗಳೂರಿಗೆ ಪರ್ಯಾಯವಾಗಿ ಬೆಳವಣಿಗೆ ಹೊಂದಲು ಬಹಳ ಅವಕಾಶ ಕಲ್ಪಿಸುತ್ತದೆ.
  4. ಬೆಂಗಳೂರು ವ್ಯಾಪ್ತಿಯ ಶಾಸಕರು, ಸಂಸದರು ಹಾಗೂ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆದು ವಲಯವಾರು ಸಮಸ್ಯೆಗಳನ್ನು ಪತ್ತೆ ಹಚ್ಚಿ ಅವುಗಳ ಶಾಶ್ವತ ಪರಿಹಾರಕ್ಕೆ ಕಾಲ ಮೀತಿಯಲ್ಲಿ ಕಾರ್ಯಕ್ರಮ ರೂಪಿಸಿ ಅದಕ್ಕೆ ತಕ್ಕ ಅನುದಾನ ಒದಗಿಸುವುದು.
Share This Article
Leave a comment