ಮಂಗಳೂರಿನ ಉಳ್ಳಾಲದ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದಿದ್ದ ಮೈಸೂರಿನ ಮಹಿಳೆಯೊಬ್ಬರು ಸಮುದ್ರ ಪಾಲಾದ ಘಟನೆ ನಡೆದಿದೆ. ಮೈಸೂರು ನಿವಾಸಿ ಭಾಗ್ಯಲಕ್ಷ್ಮೀ (45) ಮೃತರು.
ಭಾಗ್ಯಲಕ್ಷ್ಮೀ ದಂಪತಿ, ಅವರ ಮೂವರು ಪುತ್ರಿಯರು ಹಾಗೂ ಮೊಮ್ಮಗಳು ಮೈಸೂರಿನಿಂದ ಮಂಗಳೂರಿಗೆ ವಿಹಾರಕ್ಕೆಂದು ಬಂದಿದ್ದರು. ಪಂಪ್‌ವೆಲ್ ಬಳಿ ರೂಮಿನಲ್ಲಿ ತಂಗಿದ್ದ ಕುಟುಂಬ ಮೇ 28ರಂದು ಬೆಳಗ್ಗೆ ಸೋಮೇಶ್ವರ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿದ್ದರು.
ಇದನ್ನು ಓದಿ : ಮೆಡಿಕಲ್ ಸೀಟ್ ಆಮಿಷ : ಹನಿಟ್ರ್ಯಾಪ್ ಮಾಡಿ 1.6 ಕೋಟಿ ರು ವಂಚಿಸಿದ ಯುವತಿಯರೂ ಸೇರಿ ಮೂವರ ಬಂಧನ
ಅಲ್ಲಿಂದ ಉಳ್ಳಾಲದ ಸಮುದ್ರವಿಹಾರಕ್ಕೆಂದು ತೆರಳಿದ್ದ ಕುಟುಂಬದ ಪೈಕಿ ಭಾಗ್ಯಲಕ್ಷ್ಮೀ ಅವರು ಸಮುದ್ರದ ಅಲೆಯೊಂದಕ್ಕೆ ಸಿಲುಕಿ ಸಮುದ್ರಪಾಲಾಗಿದ್ದಾರೆ. ತತ್‌ಕ್ಷಣ ಕುಟುಂಬಸ್ಥರು ಕಿರುಚಲು ಆರಂಭಿಸಿದಾಗ, ಸಮೀಪದಲ್ಲಿ ಇದ್ದ ಶಿವಾಜಿ ಜೀವರಕ್ಷಕ ದಳದ ಸದಸ್ಯರು ದೌಡಾಯಿಸಿ ಮಹಿಳೆಯನ್ನು ಬದುಕಿಸುವ ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!