15ನೇ ಆವೃತ್ತಿಯ IPL ಫೈನಲ್ ಕದನಕ್ಕೂ ಮುನ್ನ ನಡೆದ ಸಮಾರೋಪ ಸಮಾರಂಭಕ್ಕೆ ವೈಭವದ ತೆರೆ ಬಿದ್ದಿದೆ.3 ವರ್ಷಗಳ ಬಳಿಕ ಸಮಾರೋಪ ಸಮಾರಂಭ ನಡೆಸಲಾಗಿದೆ. ಫೈನಲ್ ಹಣಾಹಣಿಯಲ್ಲಿ ರಾಜಸ್ಥಾನ್ ರಾಯಲ್ಸ್-ಗುಜರಾತ್ ಟೈಟನ್ಸ್ ಮದಗಜಗಳ ಕಾಳಗಕ್ಕೆ ಈ ಶ್ರೀಮಂತ ವರ್ಣರಂಜಿತ ಕಾರ್ಯಕ್ರಮ ಸಾಕ್ಷಿಯಾಯಿತು.
ಕಾರ್ಯಕ್ರಮ ನಡೆಸಿಕೊಟ್ಟ ಕಾಮೆಂಟೇಟರ್ ರವಿಶಾಸ್ತ್ರಿ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಐಪಿಎಲ್ ಅಧ್ಯಕ್ಷ ಬ್ರಿಜೇಶ್ ಪಟೇಲ್ ಮತ್ತು ಫೈನಲ್ನಲ್ಲಿ ಕಾದಾಡುವ ಉಭಯ ನಾಯಕರನ್ನು ಸಹ ವೇದಿಕೆ ಆಹ್ವಾನಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ಬಾಲಿವುಡ್ ಖ್ಯಾತ ನಟ ರಣ್‌ವೀರ್ ಸಿಂಗ್ ತಮ್ಮ ಅದ್ಭುತ ನೃತ್ಯದ ಮೂಲಕ ನಮೋ ಮೈದಾನದಲ್ಲಿ ನೆರೆದಿದ್ದ 1 ಲಕ್ಷಕ್ಕೂ ಅಧಿಕ ಪ್ರೇಕ್ಷಕರನ್ನು ರಂಜಿಸಿದರು. ಅದರಲ್ಲೂ ಕೆಜಿಎಫ್-2 ವೈಲೆನ್ಸ್, ವೈಲೆನ್ಸ್ ಡೈಲಾಗ್ ಹೇಳಿ, ಧೀರ ಧೀರ ಹಾಡಿಗೆ ಹೆಜ್ಜೆ ಹಾಕಿದ್ದು, ಪ್ರೇಕ್ಷರನ್ನೂ ಹುಚ್ಚೆದ್ದು ಕುಣಿಯುವಂತೆ ಮಾಡಿತು.
ಇದನ್ನು ಓದಿ : IPL ಪಂದ್ಯದ ಸಮಾರೋಪದಲ್ಲಿ ಮಂಡ್ಯ – ಶಿವಮೊಗ್ಗ ಕಲಾವಿದರಿಂದ ಪೂಜಾ ಕುಣಿತ, ಡೊಳ್ಳು ಕುಣಿತ
ಭಾರತ 1983ರಲ್ಲಿ ವಿಶ್ವಕಪ್ ಗೆದ್ದಿದ್ದು, 2007 ಟಿ20 ವಿಶ್ವಕಪ್, 2011ರ ಏಕದಿನ ವಿಶ್ವಕಪ್, ಆಸ್ಟ್ರೇಲಿಯಾ ನೆಲದಲ್ಲಿ ಬಾರ್ಡರ್ ಗವಾಸ್ಕರ್ ಎತ್ತಿ ಹಿಡಿದವರೆಗೂ ಟೀಮ್ ಇಂಡಿಯಾ ಮತ್ತು ಆಟಗಾರರ ಸಾಧನೆಗಳನ್ನು ಈ ಸಾಕ್ಷ್ಯ ಚಿತ್ರದಲ್ಲಿ ತೋರಿಸಲಾಯಿತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು