ಕಾಂಗ್ರೆಸ್ ಬೆಂಬಲದೊಂದಿಗೆ ರಾಜ್ಯಸಭೆಗೆ ಕುಪೇಂದ್ರ ರೆಡ್ಡಿಯನ್ನು ಮತ್ತೆ ರಾಜ್ಯಸಭೆಗೆ ಕಳುಹಿಸಿಬೇಕು ಎಂಬ ಜೆಡಿಎಸ್ ಕನಸನ್ನು ಮಾಜಿ ಸಿಎಂ ಸಿದ್ದರಾಮಯ್ಯ ನುಚ್ಚುನೂರು ಮಾಡಿದ್ದಾರೆ,ರಾಜ್ಯಸಭಾ ಕಣದಿಂದ ಯಾವುದೇ ಕಾರಣಕ್ಕೂ ನಮ್ಮ ಎರಡನೇ ಅಭ್ಯರ್ಥಿಯನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಸಿದ್ದು ಈ ನಿರ್ಧಾರದಿಂದಾಗಿ ಜೆಡಿಎಸ್ ಕನಸು ಭಗ್ನ ವಾಗಲಿದೆ, ಸಿದ್ದರಾಮಯ್ಯರ ಒತ್ತಾಸೆಯ ಮೇರೆಗೆ ಕಾಂಗ್ರೆಸ್ ರಾಜ್ಯಸಭೆ ಚುನಾವಣೆಗೆ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್ರನ್ನ ಇಳಿಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ನಾಯಕರು ಕಾಂಗ್ರೆಸ್ನ ಎರಡನೇ ಅಭ್ಯರ್ಥಿಯ ನಾಮಪತ್ರವನ್ನು ವಾಪಸ್ ಪಡೆದು, ನಮಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದರು.
ಇದನ್ನು ಓದಿ – ಮಂಡ್ಯದ ವಿಕಲಾಂಗನ ಸಮಸ್ಯೆಗೆ ಎರಡೇ ದಿನಕ್ಕೆ ಸ್ಪಂದಿಸಿದ ಪ್ರಧಾನಿ ಕಾರ್ಯಾಲಯ
ಆದರೆ ಇದಕ್ಕೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸೊಪ್ಪು ಹಾಕಿಲ್ಲ. ನನ್ನ ಕೇಳಿ ಜೆಡಿಎಸ್ ಅಭ್ಯರ್ಥಿಯನ್ನು ನಿಲ್ಲಿಸಿಲ್ಲ ಎಂದು ಖಡಕ್ ಆಗಿ ಹೇಳಿರುವ ಸಿದ್ದರಾಮಯ್ಯ, ಹೈಕಮಾಂಡ್ ನಾಯಕರೇ 2ನೇ ಅಭ್ಯರ್ಥಿ ಹಾಕಿ ಎಂದಿದ್ದಾರೆ. ನಾವು ಗೆಲ್ತೇವೆ ಎಂದು 2ನೇ ಅಭ್ಯರ್ಥಿ ಹಾಕಿದ್ದೇವೆ. ಜೆಡಿಎಸ್ನವರು ನನ್ನ ಕೇಳಿ ಅಭ್ಯರ್ಥಿ ಹಾಕಿದ್ದಾರಾ? ಬೇರೆಯವರು ಆತ್ಮ ಸಾಕ್ಷಿಯಿಂದ ಮತ ಹಾಕ್ತಾರೆ. ಬೇರೆಯವರು ಯಾರೆಂದು ನಾನು ಹೇಳಲ್ಲ. ನಮ್ಮ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು