ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು 9 ಮಂದಿ ಸಾವನ್ನಪ್ಪಿದ್ದಾರೆ , 20 ಜನರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಜರುಗಿದೆ
ದೆಹಲಿಯಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಧಾವಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿದರು.
ಇದನ್ನು ಓದಿ: PUC ಪಠ್ಯ ಪರಿಷ್ಕರಣೆಗೂ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ನೇಮಕ
ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಘಟನೆಯ ಕುರಿತು ತನಿಖೆ ಮಾಡುತ್ತಿದ್ದೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹಾಪುರ್ ಇನ್‌ಸ್ಪೆಕ್ಟರ್ ಜನರಲ್ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ದುರಂತದ ಕುರಿತು ಸಂತಾಪ ಸೂಚಿಸಿದ್ದು, ರಾಜ್ಯ ಸರ್ಕಾರವು ಗಾಯಾಳುಗಳ ಚಿಕಿತ್ಸೆಗೆ ತ್ವರಿತವಾಗಿ ತೊಡಗಿಸಿಕೊಂಡಿದೆ. ಉತ್ತರ ಪ್ರದೇಶದ ಹಾಪುರದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ನಡೆದ ಘಟನೆ ಹೃದಯವಿದ್ರಾವಕವಾಗಿದೆ. ಇದರಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪವನ್ನು ತಿಳಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ