December 20, 2024

Newsnap Kannada

The World at your finger tips!

lake,family,death

The deaths of 7 members of the same family who were drowned in the river

ಗೆದಿಲಂ ನದಿಯಲ್ಲಿ ಸ್ನಾನಕ್ಕೆಂದು ನದಿಗಿಳಿದಿದ್ದ ಒಂದೇ ಕುಟುಂಬದ 7 ಮಂದಿ ಸಾವು

Spread the love

ಭಾನುವಾರ ತಮಿಳುನಾಡಿನ ಕಡಲೂರು ಜಿಲ್ಲೆಯ ನದಿಯಲ್ಲಿ ಸ್ನಾನ ಮಾಡಲು ಹೋಗಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೆದಿಲಂ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮೃತರನ್ನು ಪ್ರಿಯಾ (19), ಪ್ರಿಯದರ್ಶಿನಿ (13), ಕವಿಯಾ (11), ಸುಮತಾ (16), ಮೋನಿಕಾ (16), ಸಂಗವಿ (15) ಮತ್ತು ಮತ್ತೊಬ್ಬ ಮಹಿಳೆ ಎಂದು ಗುರುತಿಸಲಾಗಿದೆ.

ಪ್ರಧಾನಿ ಮೋದಿ ಸಂತಾಪ

ಇದನ್ನು ಓದಿ -ಜೂನ್ 3 ನೇ ವಾರ ರಾಜ್ಯ ಸಚಿವ ಸಂಪುಟ ಪುನಾರಚನೆ : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಚಿಗುರಿದ ಆಸೆ

ʻತಮಿಳುನಾಡಿನ ಕಡಲೂರಿನಲ್ಲಿ ಯುವಕರು ಮುಳುಗಿ ಸಾವನ್ನಪ್ಪಿದ ಘಟನೆ ತಿಳಿದು ನನಗೆ ಬೇಸರವಾಗಿದೆʼಎಂದು ಬರೆದುಕೊಂಡಿದ್ದಾರೆ. ಘಟನೆ ಬಗ್ಗೆ ತಿಳಿದ ಪ್ರಧಾನಿ ಮೋದಿಯವರು ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಂತಾಪ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿಗಳ ಸಾರ್ವಜನಿಕ ಪರಿಹಾರ ನಿಧಿಯಿಂದ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!