ಈ ಬಾರಿ ದಸರಾ ಸಂಭ್ರಮ, ವೈಭವದಲ್ಲಿ ಪಾಲ್ಗೊಳ್ಳುವ ಅದೃಷ್ಟ ವಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಾಸರಿ.ನಿರ್ಗಮಿತ ಜಿಲ್ಲಾಧಿಕಾರಿ ಬಿ ಶರತ್ ನತದೃಷ್ಟ ಎಂದೇ ಹೇಳಬಹುದು.
ಅಸಲಿಗೆ ಅಂತಹ ಅದೃಷ್ಟ- ದುರಾದೃಷ್ಟದ ಮೇಲಾಟ ಏನು ಅಂತಿರಾ? ಈ ಸ್ಟೋರಿ ಓದಿ.
ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿಗೆ ಬಿ.ಶರತ್ ವರ್ಗಾವಣೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮತ್ತೊಮ್ಮೆ ಮುಂದಕ್ಕೆ ಹೋಗಿದೆ. ನವೆಂಬರ್ 3ಕ್ಕೆ ಮುಂದಿನ ವಿಚಾರಣಾ ದಿನಾಂಕ ನಿಗದಿ ಮಾಡಲಾಗಿದೆ.
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಅವಧಿಗೂ ಮುನ್ನವೇ ತಮ್ಮನ್ನ ವರ್ಗಾವಣೆ ಮಾಡಿದ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿ.ಶರತ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸಿಎಟಿ ನವೆಂಬರ್ 3 ಕ್ಕೆ ಮುಂದೂಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರದ ಅಡ್ವೊಕೇಟ್ ಜನರಲ್ ಅವರು ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ಪ್ರಕರಣವನ್ನು ನ.3 ಕ್ಕೆ ಮುಂದೂಡಲಾಗಿದೆ.
ಅರ್ಜಿದಾರರ ಪರ ವಕೀಲ, ಎ.ಎಸ್.ಪೊನ್ನಣ್ಣ ವಾದ ಮಂಡನೆ ಬಳಿಕ ಪ್ರತಿವಾದ ಮಂಡಿಸಲು ಎಜಿ ಮತ್ತೆ ಕಾಲಾವಕಾಶ ಕೋರಿದರು .ಈ ಹಿನ್ನೆಲೆ ಸಿಎಟಿ ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 23 ಕ್ಕೆ ಮುಂದೂಡಿತ್ತು. ಇದೀಗ ಮತ್ತೆ ಮರು ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ನಾಲ್ಕನೇ ಬಾರಿಗೆ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.
More Stories
2025ರಿಂದ ಕ್ಯಾನ್ಸರ್ ಲಸಿಕೆ ಉಚಿತ ವಿತರಣೆ: ಮಹತ್ವದ ವೈದ್ಯಕೀಯ ಸಾಧನೆ
ವಿರೋಧ ಲೆಕ್ಕಿಸದ ಮೋದಿ ಸರ್ಕಾರ
ಒಂದು ದೇಶ, ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ